ಸತೀಶ್ ಜಾರಕಿಹೊಳಿ  
ರಾಜಕೀಯ

ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!

KPCC ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು.

ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ಸ್ಪಷ್ಟಪಡಿವೆ. ಆದರೂ ಡಿ.ಕೆ. ಶಿವಕುಮಾ‌ರ್ ವಿದೇಶ ಪ್ರವಾಸದಲ್ಲಿದ್ದಾಗ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT