ವಿಜಯೇಂದ್ರ- ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜಕೀಯ

ಹೈಕಮಾಂಡ್'ಗೆ ದೂರು ನೀಡಲ್ಲ, ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗಿಲ್ಲ: ಯತ್ನಾಳ್

ಪಕ್ಷದ ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇವೆ. ಮಾತನಾಡುತ್ತೇವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವತಃ ಕರೆದರೂ ಮಾತುಕತೆ ಸಾಧ್ಯವಿಲ್ಲ. ನಮ್ಮದು ನಿಷ್ಠರ ಬಣ.

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗಿಲ್ಲ, ಅವರಾಗಿಯೇ ಬಂದು ನನ್ನ ಜೊತೆ ಮಾತನಾಡಿಸಿದರೂ ನಾನು ಮಾತನಾಡುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇವೆ. ಮಾತನಾಡುತ್ತೇವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವತಃ ಕರೆದರೂ ಮಾತುಕತೆ ಸಾಧ್ಯವಿಲ್ಲ. ನಮ್ಮದು ನಿಷ್ಠರ ಬಣ. ವಿಜಯೇಂದ್ರ ಪಕ್ಷದ ಅಧ್ಯಕ್ಷ ಅಷ್ಟೇ, ಅವರ ಜೊತೆ ಗುರುತಿಸಿಕೊಂಡವರೂ ಹೋರಾಟಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯಿಂದ ನನ್ನನ್ನು ಏಕೆ ಉಚ್ಚಾಟನೆ ಮಾಡುತ್ತಾರೆ. ಉಚ್ಚಾಟನೆ ಮಾಡಲು ನಾನು ಯಾರ ಜತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್‌ ಅಹಮದ್‌ ಖಾನ್‌ ಜೊತೆಗೂ ನನಗೆ ಹೊಂದಾಣಿಕೆ ಇಲ್ಲ. ಇಂತಹ ವಿಷಯಗಳು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ತಿಳಿಸಿದರು.

ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರ ಕುರಿತು ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ಪಕ್ಷದ ಅಧ್ಯಕ್ಷ. ಸಹಜವಾಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆ. ನಮ್ಮ ವಿರುದ್ಧ ದೂರು ಕೊಟ್ಟ ಬಗ್ಗೆ ಮಾಹಿತಿ ಇಲ್ಲ. ನಮಗೆ ಇನ್ನೊಬ್ಬರ ಮೇಲೆ ದೂರು ಕೊಟ್ಟು ಅಭ್ಯಾಸವೂ ಇಲ್ಲ. ಕಾಂಗ್ರೆಸ್‌ ಭಿಕ್ಷೆಯಿಂದ ಶಾಸಕರೂ ಆಗಿಲ್ಲ ಎಂದರು.

ಇನ್ನು ವಕ್ಫ್‌ ವಿರೋಧಿ ಎರಡನೇ ಹಂತದ ರಾಜ್ಯ ಪ್ರವಾಸದ ಕುರಿತು ನಾಳೆ (ಜ.03-ಶುಕ್ರವಾರ) ನಡೆಯಲಿರುವ ಸಭೆಯಲ್ಲಿ ತೀರ್ಮಾನವಾಗಲಿದ್ದು, ವಕ್ಫ್‌ ವಿರೋಧಿ ಹೋರಾಟದ ಮಹತ್ವವನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವುದಾಗಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT