ಪರಮೇಶ್ವರ್  
ರಾಜಕೀಯ

ಡಿ.ಕೆ ಶಿವಕುಮಾರ್ ವಿರುದ್ಧ ಪರಮೇಶ್ವರ್ ಶಕ್ತಿ ಪ್ರದರ್ಶನ: SC- ST ಶಾಸಕರಿಗೆ ಭೂರಿ ಭೋಜನ!

ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜನವರಿ 2 ರಂದು ವಿದೇಶದಲ್ಲಿದ್ದಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೋಟೆಲ್‌ನಲ್ಲಿ ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ.

ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲು ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಶಾಸಕರು ಮತ್ತು ಎಂಎಲ್‌ಸಿಗಳು ‘ಮೆಗಾ ಪ್ಲಾನ್’ ಭಾಗವಾಗಿದ್ದಾರೆ ಎಂದು ಮೂಲವೊಂದು ಟಿಎನ್‌ಐಇಗೆ ತಿಳಿಸಿದೆ.

ಮಲೇಷ್ಯಾದಲ್ಲಿರುವ ಪರಮೇಶ್ವರ ಅವರು ಎಸ್‌ಸಿ ಸಮುದಾಯದ ಆಂತರಿಕ ಕೋಟಾ, ಎಸ್‌ಸಿ/ಎಸ್‌ಟಿ ಸಮುದಾಯಗಳ ಬೃಹತ್ ರ‍್ಯಾಲಿ ಸೇರಿದಂತೆ ನಾನಾ ವಿಷಯಗಳ ಚರ್ಚೆ ನೆಪದಲ್ಲಿ ಶಾಸಕರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ವಾಸ್ತವವಾಗಿ, ಜಾರಕಿಹೊಳಿ ಆಯೋಜಿಸಿದ್ದ ಔತಣಕೂಟದಲ್ಲಿ, ಶಿವಕುಮಾರ್ ಅವರನ್ನು ಎದುರಿಸುವ ಕಾರ್ಯತಂತ್ರದ ಭಾಗವಾಗಿ ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ, ಅವರಲ್ಲಿ ಎಷ್ಟು ಮಂದಿ ಔತಣಕೂಟಕ್ಕೆ ಹಾಜರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ 39,272 ಕೋಟಿ ರೂ ಇನ್ನೂ ಬಿಡುಗಡೆಯಾಗಬೇಕಿದೆ. ಎಸ್‌ಸಿಪಿ/ಟಿಎಸ್‌ಪಿ ನಿಧಿಯ ಬಗ್ಗೆ ಯಾರೋಬ್ಬರು ಧ್ವನಿ ಎತ್ತಿರಲಿಲ್ಲ, ಸಂಬಂಧಪಟ್ಟ ಮಂಡಳಿಗಳು ಮತ್ತು ನಿಗಮಗಳಿಗೆ ಕೇವಲ 600 ಕೋಟಿ ರೂ.ಗಳನ್ನು ನೀಡಲಾಗಿದ್ದು, ಅದರಲ್ಲಿ ಒಂದು ರೂಪಾಯಿಯೂ ಬಳಕೆಯಾಗುತ್ತಿಲ್ಲ ಹೀಗಾಗಿ ಸಭೆಯಲ್ಲಿ ಅವರನ್ನು ಪ್ರಶ್ನಿಸಲಿದ್ದೇವೆ ಎಂದು ಶಾಸಕರೊಬ್ಬರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT