ಸಿಎಂ ಬೊಮ್ಮಾಯಿ, ಡಿಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್‌ನಲ್ಲಿ ಅಭದ್ರತೆ-ಒಳ ಬೇಗುದಿ ಇದೆ, ಡಿಕೆಶಿ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬೊಮ್ಮಾಯಿ

ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ. ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭ ದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ. ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ. ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣ ವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್ಸಿ-ಎಸ್ಟಿ ಬೋರ್ ವೆಲ್ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎಂಬ ಭಾವನೆ ಮೂಡಿರಬಹುದು ಎಂದು ಹೇಳಿದರು.

ಸರ್ಕಾರದಲ್ಲಿ ಒಂದೊಂದು ಇಲಾಖೆ ಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಎಂದು ಹೇಳಲು ಆಗುವುದಿಲ್ಲ. ಇದಕ್ಕೇ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕುಮಾರಸ್ವಾಮಿ ಹೇಳಿದ್ದು ಎಂದರು.

ಕಾಂಗ್ರೆಸ್ನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆ ಯುತ್ತಿಲ್ಲ. ಅಂಗನಾವಡಿ ಕಾರ್ಯ ಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದೆಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ. ರಾಜ್ಯ ಬಿಜೆಪಿಯಲ್ಲಿನ ಗೊಂದಲ ಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!