ಎಚ್.ಡಿ ಕುಮಾರಸ್ವಾಮಿ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ನನಗೆ ತೊಂದರೆ ಕೊಡುವವರಿಂದ ರಕ್ಷಣೆಗಾಗಿ ಹೋಮ-ಹವನ: HDK ಶತ್ರು ಸಂಹಾರ ಪೂಜೆ ಹೇಳಿಕೆಗೆ ಡಿಕೆಶಿ ತಿರುಗೇಟು; Video

ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ.

ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗಾಗಿ ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, "ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ" ಎಂದು ಹೇಳಿದರು.

ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ" ಎಂದರು.

"ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ" ಎಂದು ಹೇಳಿದರು.

ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ" ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಎಲ್ಲರನ್ನು ದೇವರೇ ಕಾಪಾಡಬೇಕು, ಅಧಿಕಾರ ಬೇಕು ಅಂತ ಅಲ್ಲಿ ಎಲ್ಲೋ ಶತ್ರು ನಾಶಕ್ಕೆ ಹೋಗೋದು, ಅಲ್ಲೂ ಕೂಡಾ ದೇವರನ್ನ ಅಧಿಕಾರ ಕೊಡಪ್ಪ, ಶತ್ರು ನಾಶ ಮಾಡು ಅಂತಾನೆ ಕೆಲವರು ಕೇಳೋದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟಾಂಗ್ ನೀಡಿದ್ದರು.

ಇವತ್ತು ವೈಕುಂಠ ಏಕಾದಶಿ, ಹೀಗಾಗಿ ವೈಕುಂಠ ಬಾಗಿಲು ತೆಗೆಯುತ್ತೆ ಅಂತ ಪ್ರತೀತಿ ಇದೆ‌. ದೇವರಲ್ಲಿ ಪ್ರಾರ್ಥನೆ ಮಾಡಿ ಒಳ್ಲೆದು ಮಾಡಲಿ ಅಂತ, ಮುಕ್ತಿ ಕೊಡಪ್ಪ ಅಂತ ಪ್ರಾರ್ಥನೆ ಮಾಡಿಕೊಳ್ಳೋದು ಒಳ್ಳೆದು ಅಂತ ಕಾಲೆಳೆದಿದ್ದಾರೆ.ಅ ವಿಷ್ಣು ದೇಶ ಆಳೋರಿಗೆ, ರಾಜ್ಯ ಆಳೋರಿಗೆ ಎಲ್ಲರಿಗೂ ಸದ್ಬುದ್ದಿ ಕೊಟ್ಟು ಜನತೆಯ ಸಮಸ್ಯೆಗೆ ಒಳ್ಳೆಯ ಕೆಲಸ ಮಾಡುವ ವಾತಾವರಣ ದೇವರು ನಿರ್ಮಾಣ ಮಾಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT