ಬಿವೈ ವಿಜಯೇಂದ್ರ 
ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಗುಂಪುಗಾರಿಕೆ ಅಂತ್ಯಕ್ಕೆ ಪಕ್ಷದ ವರಿಷ್ಠರಿಂದ ಹೊಸ 'ಫಾರ್ಮುಲಾ'!

ವಿಜಯೇಂದ್ರ ಈಗಾಗಲೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದು, ತಮ್ಮ ತಂಡಕ್ಕೆ ಸೇರಲು ಮತ್ತು ಸಹಕರಿಸಲು ಕರೆ ನೀಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹಿರಿಯ ಸದಸ್ಯರು ಈ ನಿಟ್ಟಿನಲ್ಲಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಗುಂಪುಗಾರಿಕೆಯನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಒಂದು ತಂತ್ರವನ್ನು ರೂಪಿಸಿದೆ, ಪಕ್ಷದ ಪದಾಧಿಕಾರಿಗಳನ್ನು ಪುನರ್ರಚಿಸುವಂತೆ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೂಚನೆ ನೀಡಿದೆ.

ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಸದಸ್ಯರನ್ನು ಸಹ ಹೊಸ ಪಟ್ಟಿಯಲ್ಲಿ ಸೇರಿಸಲು ಸೂಚಿಸಲಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಪಾಧ್ಯಕ್ಷರ ಹುದ್ದೆಗಳು ಸೇರಿದಂತೆ ಪಕ್ಷದ ಸಾಂಸ್ಥಿಕ ವ್ಯವಸ್ಥೆಯಲ್ಲಿನ ಬದಲಾವಣೆಗಳು ಜನವರಿ 14 ರ ಸಂಕ್ರಾಂತಿಯ ದಿನವಾದ ನಂತರ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ವಿಜಯೇಂದ್ರ ಈಗಾಗಲೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದು, ತಮ್ಮ ತಂಡಕ್ಕೆ ಸೇರಲು ಮತ್ತು ಸಹಕರಿಸಲು ಕರೆ ನೀಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹಿರಿಯ ಸದಸ್ಯರು ಈ ನಿಟ್ಟಿನಲ್ಲಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಪುನರ್ರಚನೆಯು ಆಂತರಿಕ ಜಗಳಕ್ಕೆ ಅಂತ್ಯ ಹಾಡುತ್ತದೆಯೇ ಎಂದು ಕಾದು ನೋಡಬೇಕಾಗಿದೆ, ವಿಜಯೇಂದ್ರ ಅವರನ್ನು ಪಕ್ಷ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಬೇಕೆಂದು ಯತ್ನಾಳ್ ಬಣದ ಬಯಕೆಯಾಗಿದೆ. ಪಕ್ಷದ ಉನ್ನತ ಹುದ್ದೆಯ ಆಕಾಂಕ್ಷಿಯಾಗಿದೇದ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸೇರಿದಂತೆ ಕೆಲವು ನಾಯಕರ ಬೆಂಬಲ ಯತ್ನಾಳ್ ಅವರಿಗೆ ಇದೆ.

ಒಂದು ವರ್ಷದ ಹಿಂದೆ ವಿಜಯೇಂದ್ರ ಅಧ್ಯಕ್ಷರಾದಾಗ, ಅವರು ತಮ್ಮದೇ ಆದ ತಂಡವನ್ನು ರಚಿಸಿಕೊಂಡರು, ಆಗ ಎದುರಾಳಿ ಬಣಗಳ ಸದಸ್ಯರನ್ನು ನಿರ್ಲಕ್ಷಿಸಿದರು, ಇದು ಹಿರಿಯ ನಾಯಕರಿಗೆ ಇಷ್ಟವಾಗಲಿಲ್ಲ, ಅವರು ಸಭೆಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ವಿಜಯೇಂದ್ರ ಅವರನ್ನು ನೇಮಕ ಮಾಡುವ ನಿರ್ಧಾರ ತೆಗೆದುಕೊಂಡ ಪಕ್ಷದ ಹೈಕಮಾಂಡ್, ಅವರನ್ನು ತೆಗೆದುಹಾಕುವ ಸಾಧ್ಯತೆಯಿಲ್ಲ ಏಕೆಂದರೆ ಅದು ಪಕ್ಷದ ಸಮಗ್ರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಯತ್ನಾಳ್ ಅವರ ಪಾಳಯದೊಂದಿಗೆ ಗುರುತಿಸಿಕೊಂಡಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ, ಗುರುವಾರ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ 'ಸಂವಿಧಾನ ಸನ್ಮಾನ ದಿನ'ದಲ್ಲಿ ಭಾಗವಹಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅದರಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಸಂಘಟನೆಯ ಬಗ್ಗೆ ಮಾತನಾಡಿದರು. ಆದರೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಹಾಜರಿದ್ದರೂ, ಯತ್ನಾಳ್ ಪಟ್ಟಣದಲ್ಲಿದ್ದರೂ ಕಾರ್ಯಕ್ರಮವನ್ನು ತಪ್ಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT