ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಕಾಂಗ್ರೆಸ್ ಸರ್ಕಾರದ ಪ್ರತೀ ಸಹಿ ಮಾರಾಟಕ್ಕಿದೆ: ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ

ಕಂದಾಯ ಇಲಾಖೆಯಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ಎಷ್ಟು ದುಡ್ಡು ತೆಗೆದುಕೊಳ್ಳಲಾಗುತ್ತಿದೆ ಎಂಬುದು ಗೊತ್ತಾ? ಎಲ್ಲಾ ಹುದ್ದೆಗಳಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರದಲ್ಲಿ ಶೇ.60 ಕಮಿಷನ್ ನಡೆಯತ್ತಿದೆ ಎಂದು ಕಿಡಿಕಾರಿದರು.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪ್ರತಿಯೊಂದು ಸಹಿಯನ್ನೂ ಮಾರಾಟಕ್ಕೆ ಇಟ್ಟಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ಎಷ್ಟು ದುಡ್ಡು ತೆಗೆದುಕೊಳ್ಳಲಾಗುತ್ತಿದೆ ಎಂಬುದು ಗೊತ್ತಾ? ಎಲ್ಲಾ ಹುದ್ದೆಗಳಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರದಲ್ಲಿ ಶೇ.60 ಕಮಿಷನ್ ನಡೆಯತ್ತಿದೆ ಎಂದು ಕಿಡಿಕಾರಿದರು.

ಮಗ ಸೋತಿರುವುದಕ್ಕೆ ಹತಾಶನಾಗಿ ನಾನು ಈ ಆರೋಪ ಮಾಡುತ್ತಿದ್ದೇನೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅದು ಬಿಡಿ , ನಿಮ್ಮ ಕಂದಾಯ ಇಲಾಖೆಯಲ್ಲಿ ಪಡೆಯುತ್ತಿರುವ ಕಮಿಷನ್‌ ಬಗ್ಗೆ ಮಾತನಾಡಿ. ಕಂದಾಯ ಇಲಾಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆಯೇ? "ಬೆಂಗಳೂರಿನ ಸಹಾಯಕ ಆಯುಕ್ತ ಹುದ್ದೆಗೆ ಎಷ್ಟು ಹಣ ಪಾವತಿಸಬೇಕು? ನೀವು ಎಷ್ಟು ನಿಗದಿಪಡಿಸಿದ್ದೀರಿ? ಈ ಪಾಲು ಯಾರೆಲ್ಲರಿಗೂ ಸಿಗುತ್ತದೆ? ಕಂದಾಯ ಇಲಾಖೆಯಲ್ಲಿನ ವ್ಯವಸ್ಥೆಯ ಬಗ್ಗೆ ನನಗೆ ತಿಳಿದಿದೆ. ಇದಕ್ಕೆ ಬೈರೇಗೌಡ ಉತ್ತರಿಸಲಿ ಎಂದು ಸವಾಲು ಹಾಕಿದರು.

ದಲಿತ ಶಾಸಕರ ಡಿನ್ನರ್‌ ಪಾರ್ಟಿಯ ಕುರಿತು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಡಿನ್ನರ್ ಪಾರ್ಟಿಯಲ್ಲಿ ಚರ್ಚೆಮಾಡುತ್ತಾರಂತೆ. ಹಾಗಿದ್ದಲ್ಲಿ ಸಚಿವ ಸಂಪುಟ ಸಭೆ ಏತಕ್ಕೆ ಬೇಕು ಎಂದು ಟೀಕಿಸಿದರು.

ಶೇ.60 ಕಮಿಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು, ಗುತ್ತಿಗೆದಾರರೇ ಈ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಲಿ ಎಂದರು.

‘ಸಿದ್ದರಾಮಯ್ಯ ಮಹಾನ್ ನಾಯಕರು. ಪೇಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಜನರ ಮುಂದೆ ಯಾವ ದಾಖಲೆ ಇಟ್ಟಿದ್ದಾರೆ? ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕೆಂಪಣ್ಣ ಅವರಿಂದ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಕಮಿಷನ್‌ ಕೇಳದೇ ಇದ್ದರೆ ಈಗ ಗುತ್ತಿಗೆದಾರರು ಏಕೆ ಆರೋಪ ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel