ಸಿದ್ದರಾಮಯ್ಯ 
ರಾಜಕೀಯ

ಸೋನಿಯಾ-ರಾಹುಲ್ ಅಧಿಕಾರ ತ್ಯಾಗ ಮಾಡಿದಂತೆ, ನಾವು ಅದೇ ಹಾದಿಯಲ್ಲಿ ಸಾಗಬೇಕು: ಸಿಎಂ ಸಿದ್ದರಾಮಯ್ಯ ವೈರಾಗ್ಯದ ಹೇಳಿಕೆ

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ತ್ಯಾಗದ ಮಾತನ್ನು ಆಡಿದ್ದಾರೆ.

ಬೆಂಗಳೂರು: ಅಧಿಕಾರ ಹಂಚಿಕೆ ಕುರಿತಂತೆ ತೀವ್ರ ಚರ್ಚೆಗಳು ನಡುತ್ತಿರುವ ಮಧ್ಯೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧಿಕಾರ ತ್ಯಾಗ ಮಾಡಿದಂತೆ, ನಾವು ಅದೇ ಹಾದಿಯಲ್ಲಿ ಸಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು ಅವರ ಮಾತಿನಲ್ಲಿ ವೈರಾಗ್ಯದ ಛಾಯೆ ಕಂಡುಬಂದಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ತ್ಯಾಗದ ಮಾತನ್ನು ಆಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಅನೇಕ ಕಾಂಗ್ರೆಸ್ಸಿಗರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ನಮ್ಮಲ್ಲೂ ಕೂಡ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಲಿದಾನಗಳನ್ನು ಮಾಡಿದ್ದಾರೆ, ಅವರಿಗಿಂತ ನಾವು ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ನಾವು ಅನಿವಾರ್ಯ ಪರಿಸ್ಥಿತಿ ಬಂದರೆ ತ್ಯಾಗ ಮಾಡಬೇಕಾಗುತ್ತದೆ ಎಂಬ ಅರ್ಥದಲ್ಲಿ ಸಿಎಂ ಮಾತನಾಡಿದ್ದಾರೆ.

ತ್ಯಾಗಕ್ಕೆ ಸಿದ್ದ ಎಂಬ ಸಂದೇಶದ ಮೂಲಕ ಸಿಎಂ ಸಿದ್ದರಾಮಯ್ಯ ವಿರೋಧಿ ಬಣಕ್ಕೂ ಸಂದೇಶವನ್ನು ರವಾನೆ ಮಾಡಿದ್ದಾರಾ ಎಂಬ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಮತ್ತೊಂದೆಡೆ ಕಾರ್ಯಕರ್ತರ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ತ್ಯಾಗದ ಮಾತನ್ನಾಡಿದ್ದರು. ಅವರು ಕೂಡಾ ಕಾಂಗ್ರೆಸ್ ನಾಯಕರ ಉದಾಹರಣೆಯನ್ನು ನೀಡಿ, ಕೆಲವರು ಸಚಿವ ಸ್ಥಾನ ತ್ಯಾಗ ಮಾಡಬೇಕಾಗಿ ಬರಬಹುದು ಎಂದು ಪರೋಕ್ಷವಾಗಿ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್

SCROLL FOR NEXT