ಭಾಸ್ಕರ್ ರಾವ್ 
ರಾಜಕೀಯ

ನಿಜವಾದ ಅಪರಾಧಿಗಳನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರದ ಪ್ರಯತ್ನ: ಭಾಸ್ಕರ್ ರಾವ್

ಚಾಮರಾಜಪೇಟೆಯಲ್ಲಿರುವ ಶತಮಾನಗಳಷ್ಟು ಹಳೆಯದಾದ ಪಶುವೈದ್ಯಕೀಯ ಆಸ್ಪತ್ರೆಯನ್ನು ಮುಚ್ಚಲು ನಡೆಯುತ್ತಿರುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಹೇಳಿದರು.

ಬೆಂಗಳೂರು: ಚಾಮರಾಜಪೇಟೆಯಲ್ಲಿ ಗೋವುಗಳ ಮೇಲಿನ ಹಿಂಸಾಚಾರದ ನಿಜವಾದ ಅಪರಾಧಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷದ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಬಿಜೆಪಿ ನಾಯಕ ಮತ್ತು ಬೆಂಗಳೂರು ನಗರ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಗೋವುಗಳ ಮೇಲಿನ ಹಿಂಸಾಚಾರವು ಹಿಂದೂ ಸಮುದಾಯದಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಚಾಮರಾಜಪೇಟೆಯಲ್ಲಿರುವ ಶತಮಾನಗಳಷ್ಟು ಹಳೆಯದಾದ ಪಶುವೈದ್ಯಕೀಯ ಆಸ್ಪತ್ರೆಯನ್ನು ಮುಚ್ಚಲು ನಡೆಯುತ್ತಿರುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಹೇಳಿದರು.

ಹಿಂಸಾಚಾರಕ್ಕೆ ಒಳಗಾದ ಗೋವುಗಳ ಮಾಲೀಕರಿಗೆ ಮೂರು ಗೋವುಗಳನ್ನು ಖರೀದಿಸುವುದಾಗಿ ನೀಡಿದ್ದ ಚಾಮರಾಜಪೇಟೆ ಶಾಸಕ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ಅವರು ಟೀಕಿಸಿದರು. ಇದೊಂದು ಷಡ್ಯಂತ್ರ. ಚಾಮರಾಜಪೇಟೆಯಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನ ಓಡಿಸಲು ಷಡ್ಯಂತ್ರ. ಸಚಿವ ಜಮೀರ್ ಮೂರು ಹಸು ಕೊಡಿಸುತ್ತೇನೆ ಎಂದಿದ್ದಾರೆ. ಅವರಿಗೆ ಭಾವನೆಯೇ ಇಲ್ಲ, ಅದೇನು ಆಟದ ವಸ್ತುವಾ? ತಾಳ್ಮೆಯಿಂದ ಇರುವ ಕಾರಣ ರಕ್ತಪಾತ ಆಗಿಲ್ಲ. ರಾಜ್ಯ ಸರ್ಕಾರದ ಅದೃಷ್ಟ ಇದು ಎಂದು ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪೊಲೀಸರು ಮೂರು ಗೋವುಗಳ ಕೆಚ್ಚಲು ಕತ್ತರಿಸಲು ಕಾರಣರಾದವರನ್ನು ಬಂಧಿಸಬೇಕು ಎಂದು ಹೇಳಿದರು. ಪೊಲೀಸರು ಬಂಧಿತ ವ್ಯಕ್ತಿಯನ್ನು ಪ್ರಶ್ನಿಸಬೇಕು ಮತ್ತು ಇಂತಹ ಅಮಾನವೀಯ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್‌ನ ಸರಣಿ ಸಭೆಗಳನ್ನು ಟೀಕಿಸಿದ ಬಿಜೆಪಿ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಭೆಗಳ ನಂತರವೂ ಕಾಂಗ್ರೆಸ್‌ನಲ್ಲಿನ ಸಮಸ್ಯೆಗಳು ಕೊನೆಗೊಳ್ಳುವುದಿಲ್ಲ ಎಂದು ಹೇಳಿದರು. ಅಧಿಕಾರ ಹಂಚಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ ಭರವಸೆಯ ಬಗ್ಗೆ ಕಾಂಗ್ರೆಸ್ ಶಾಸಕರು ಸ್ಪಷ್ಟತೆ ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT