ಗೋಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು 
ರಾಜಕೀಯ

ವಿಕೃತ ಘಟನೆಗೆ ಕಾಂಗ್ರೆಸ್ ಓಲೈಕೆ ರಾಜಕಾರಣ ಕಾರಣ; ಮುಸ್ಸಿಮರಿಗೆ ಏನಾದರೂ ಆಗಿದ್ರೆ ಸಿದ್ದರಾಮಯ್ಯ ಪಂಚೆ ಎತ್ತಿಕೊಂಡು ಬರುತ್ತಿದ್ದರು!

ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಅವರು ಖಂಡಿಸಿದರು.

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರದ ತುಷ್ಟೀಕರಣವೇ ಕಾರಣ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.

ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಅವರು ಖಂಡಿಸಿದರು. ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ ಎಂದು ಅವರು ತಿಳಿಸಿದರು.

ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಹಿಂದೂ- ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಗೂಂಡಾಗಿರಿ ಸರಕಾರ; ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು ಎಂದು ತಿಳಿಸಿದರು.

ಏತನ್ಮಧ್ಯೆ, ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆಯೂ ಅವರು ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ ಎಂದು ಹೇಳಿದರು. "ಈ ಸರ್ಕಾರ ಕಾರ್ಯನಿರ್ವಹಿಸುತ್ತಿರುವ ರೀತಿ ನೋಡಿದರೆ, ನೌಕರರ ಸಂಬಳವನ್ನು ಸಹ ಪಾವತಿಸುವುದು ಕಷ್ಟಕರವಾಗುತ್ತದೆ. ಪರಿಸ್ಥಿತಿ ಹದಗೆಟ್ಟಿದೆ.

ಅನುಭವಿ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಗುತ್ತಿಗೆದಾರರು ತಮ್ಮ ಪಾವತಿಗಳನ್ನು ಪಡೆದಿಲ್ಲ, ಮತ್ತು ಅವರಲ್ಲಿ ಹೆಚ್ಚಿನವರು ಅತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಒಳಜಗಳದ ಕುರಿತು ಮಾತನಾಡಿದ ವಿಜಯೇಂದ್ರ, ಪಕ್ಷದೊಳಗಿನ ಅನೇಕ ಜನರು ಸಿದ್ದರಾಮಯ್ಯ ಅವರ ರಾಜೀನಾಮೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು. "ಮುಖ್ಯವಾಗಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ರಾಜೀನಾಮೆಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಕಾಂಗ್ರೆಸ್‌ನಲ್ಲಿನ ಒಳಜಗಳ ಬಹಿರಂಗಗೊಳ್ಳುತ್ತಿದೆ ಮತ್ತು ಜನರು ಅದನ್ನು ನೋಡುತ್ತಿದ್ದಾರೆ. ಎಲ್ಲರೂ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ, ಎಂಟಕ್ಕೂ ಹೆಚ್ಚು ಸ್ಪರ್ಧಿಗಳು ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ ಒಂದು ದಿನದ ನಂತರ, ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ಅಪರಾಧದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಒತ್ತಿ ಹೇಳಿದರು. "ತನಿಖೆ ನಡೆಯುತ್ತಿದೆ. ಆರೋಪಿಗಳು ಬೇರೆ ಯಾರನ್ನಾದರೂ ಹೆಸರಿಸಿದರೆ, ಅವರನ್ನೂ ಬಂಧಿಸಲಾಗುವುದು. ಆರೋಪಿ ಬಿಹಾರದವನಾಗಿದ್ದು, ಹಸುಗಳ ಕೆಚ್ಚಲು ಕತ್ತರಿಸಿದ ಸಮಯದಲ್ಲಿ ಅವನು ಕುಡಿದಿದ್ದ. ಸರ್ಕಾರ ಯಾರನ್ನೂ ಬಿಡುವುದಿಲ್ಲ. ಪ್ರಕರಣದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT