ಎಂ. ಬಿ. ಪಾಟೀಲ್ 
ರಾಜಕೀಯ

ಶಿವಕುಮಾರ್‌-ಸತೀಶ ಜಾರಕಿಹೊಳಿ ಮಧ್ಯೆ ಜಗಳ ಆಗಿಲ್ಲ; ನಾಯಕತ್ವದ ಬಗ್ಗೆ ಯಾವ ಗೊಂದಲವೂ ಇಲ್ಲ: ಎಂ.ಬಿ ಪಾಟೀಲ್

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಸಚಿವರಾದ ಜಿ. ಪರಮೇಶ್ವರ ಮತ್ತು ಕೆ.ಎನ್‌. ರಾಜಣ್ಣ ಅವರು ಕಾರಣಾಂತರಗಳಿಂದ ಕೆಪಿಸಿಸಿ ಸರ್ವಸದಸ್ಯರ ಸಭೆಗೆ ಬಂದಿರಲಿಲ್ಲ ಎಂದರು.

ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ. ಶಿವಕುಮಾರ್‌ ಮತ್ತು ಸತೀಶ ಜಾರಕಿಹೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದರು.

ಜಾತಿಗಣತಿ ವರದಿಯನ್ನು ನಾನು ಯಾವತ್ತೂ ವಿರೋಧಿಸಿಲ್ಲ. ಆದರೆ ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕೆಂದು ಹೇಳುತ್ತಾ ಬಂದಿದ್ದೇನೆ. ಇಷ್ಟಕ್ಕೂ ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಯಾರೂ ನೋಡಿಲ್ಲ. ಆದರೆ ಸುರ್ಜೇವಾಲಾ ಕೂಡ ಯಾವೊಂದು ಸಮುದಾಯಕ್ಕೂ ನೋವು ಆಗದಂತೆ ನಾವು ನಡೆದುಕೊಳ್ಳಬೇಕು ಎಂದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT