ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ 
ರಾಜಕೀಯ

ಸುಗಮ ಅಧಿಕಾರ ಹಸ್ತಾಂತರಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಕಸರತ್ತು! ಸಿದ್ದರಾಮಯ್ಯ ರಾಜಕೀಯ ಜೀವನದ ಸಂಧ್ಯಾಕಾಲ ಸನ್ನಿಹಿತ?

ಹೈಕಮಾಂಡ್ ಮಟ್ಟದಲ್ಲಿ, ಅಧಿಕಾರ ಹಂಚಿಕೆಯ ಕುರಿತು ಒಪ್ಪಂದವಾಗಿತ್ತು, ಅದಕ್ಕೆ ಸಿದ್ದರಾಮಯ್ಯ ಕೂಡ ಸಮ್ಮತಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯದಲ್ಲಿ ಸುಗಮ ಅಧಿಕಾರ ವರ್ಗಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ಕಸರತ್ತು ಆರಂಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಲ್ಲಾ ಸಲಹೆಗಳನ್ನು ಸ್ವೀಕರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರ ನಿಷ್ಠಾವಂತ, ಆಪ್ತ ಬೆಂಬಲಿಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ, ಪಕ್ಷದ ಹೈಕಮಾಂಡ್ ಯಾವುದೇ ಕಾಂಗ್ರೆಸ್ ನಾಯಕನಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ಮಟ್ಟದಲ್ಲಿ, ಅಧಿಕಾರ ಹಂಚಿಕೆಯ ಕುರಿತು ಒಪ್ಪಂದವಾಗಿತ್ತು, ಅದಕ್ಕೆ ಸಿದ್ದರಾಮಯ್ಯ ಕೂಡ ಸಮ್ಮತಿಸಿದ್ದರು ಎಂದು ಮೂಲಗಳು ತಿಳಿಸಿವೆ. ಸೋಮವಾರ ನಡೆದ ಕೆಪಿಸಿಸಿ ಸಾಮಾನ್ಯ ಸಭೆಯಲ್ಲಿ, ಸಿದ್ದರಾಮಯ್ಯ ಗಾಂಧಿ ಕುಟುಂಬದ ತ್ಯಾಗದ ಬಗ್ಗೆ ಮಾತನಾಡಿದರು. ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತ್ಯಾಗ ಮಾಡಿದ್ದಾರೆ , ಹೀಗಾಗಿ ನಾವು ಕೂಡ ಅವರ ಹಾದಿಯಲ್ಲಿ ಸಾಗಬೇಕು ಎಂದು ಅವರು ಹೇಳಿದರು.

ನಂತರ ಸಿಎಲ್‌ಪಿ ಸಭೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಪ್ರತಿಪಾದಿಸಿದ್ದರು. ಡಿಸೆಂಬರ್ 7, 2024 ರಂದು ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿದ್ದೇನೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಶಿವಕುಮಾರ್ ಅವರು ಸಿಎಂ ಹುದ್ದೆಗೆ ಪ್ರಬಲ ಸ್ಪರ್ಧಿಯಾದರೆ, ಸಿದ್ದರಾಮಯ್ಯ ಅವರು ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ ಅಥವಾ ವೀರಶೈವ ಲಿಂಗಾಯತರು ಸೇರಿದಂತೆ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಎರಡು ಅಥವಾ ಮೂರು ಡಿಸಿಎಂ ಹುದ್ದೆಗಳಿಗೆ ಬೇಡಿಕೆ ಇಡುತ್ತಾರೋ ಎಂಬುದು ಸದ್ಯದ ಕುತೂಹಲವಾಗಿದೆ.

ಈ ಸಮೀಕರಣವನ್ನು ಗಮನಿಸಿದರೆ, ಶಿವಕುಮಾರ್ ಮುಂದಿನ ಸಿಎಂ ಆಗುತ್ತಾರೆ ಎಂಬ ಗುಸುಗುಸು ಈಗಾಗಲೇ ಶಿವಕುಮಾರ್ ಪಾಳಯದಲ್ಲಿ ಕೇಳಿಬರುತ್ತಿದೆ. ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಒಕ್ಕಲಿಗ ಮತ್ತು ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ಕೂಡ ಇತ್ತೀಚೆಗೆ ಬಹಿರಂಗವಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ.

ಶಿವಕುಮಾರ್ ಇತ್ತೀಚೆಗೆ ತಮ್ಮ ಟೆಂಪಲ್ ರನ್ ಸಂದರ್ಭದಲ್ಲಿ, ಪಕ್ಷದ ಹೈಕಮಾಂಡ್ ಮೇಲೆ ನಂಬಿಕೆ ಇಟ್ಟಿರುವುದರಿಂದ ತನಗೆ ಯಾರ ಬೆಂಬಲವೂ ಅಗತ್ಯವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT