ರಾಜಕೀಯ

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ

ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಧ್ಯಕ್ಷನಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಅದನ್ನು ಸಂಘಟಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ, ಪಕ್ಷದ ಹಿರಿಯ ನಾಯಕರು ಪಕ್ಷವನ್ನು ಮೂಲದಿಂದ ಕಟ್ಟಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ದಾಳಿ ಮಾಡುವಾಗ ಅಥವಾ ಟೀಕಿಸುವಾಗ ಜಾಗರೂಕರಾಗಿರಬೇಕು, ಅಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡಬಹುದು ಎಂದು ಹೇಳಿದರು.

ಮುಖ್ಯಮಂತ್ರಿ ರಾಜೀನಾಮೆ ನೀಡಲಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ವಿಜಯೇಂದ್ರ ಹೇಳಿದರು. ಎಂಟು ಮಂದಿ ಪ್ರಬಲ ಆಕಾಂಕ್ಷಿಗಳು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದರೂ, ಅನುಭವಿ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರನ್ನು ಶಿವಕುಮಾರ್ ವಿರುದ್ಧ ಹೇಳಿಕೆ ನೀಡುವಂತೆ ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವರು ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಲಾಬಿ ಮಾಡುತ್ತಿದ್ದಾರೆ, ಭೋಜನ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ವರದಿಯನ್ನು ಬಳಸುತ್ತಿದ್ದಾರೆ, ಅವರ ಸಿಎಂ ಕುರ್ಚಿಗೆ ಬೆದರಿಕೆ ಬಂದಾಗಲೆಲ್ಲಾ ಈ ವಿಷಯವನ್ನು ಎತ್ತುತ್ತಿದ್ದಾರೆ. ಜಾತಿ ಜನಗಣತಿಯನ್ನು ಅತ್ಯಂತ ಅವೈಜ್ಞಾನಿಕ ವರದಿ ಎಂದು ಬಣ್ಣಿಸಿದ ಅವರು, ಬಿಜೆಪಿ ಇತರ ಸಮುದಾಯಗಳಿಗೆ ಅಧಿಕಾರ ನೀಡುವುದನ್ನು ವಿರೋಧಿಸುವುದಿಲ್ಲ, ಆದರೆ ಅದನ್ನು ರಾಜಕೀಯ ಸಾಧನವಾಗಿ ಬಳಸುವುದು ತಪ್ಪು ಎಂದು ವಿಜಯೇಂದ್ರ ಹೇಳಿದರು.

ಬೀದರ್‌ನಲ್ಲಿ ಎಟಿಎಂ ಕ್ಯಾಶ್ ಗಾರ್ಡ್‌ನ ದಾಳಿ ಮತ್ತು ಸಾವಿನ ಕುರಿತು, ಕಲಬುರಗಿಯಲ್ಲಿ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಮತ್ತು ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸುವುದು ಸೇರಿದಂತೆ ಇಂತಹ ಅಪರಾಧಗಳು ಸರ್ಕಾರವು ದೇಶ ವಿರೋಧಿ ಅಂಶಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಮತ್ತು ಕುಕೃತ್ಯ ನಡೆಸುವವರಿಗೆ ಸರ್ಕಾರ ಮುಕ್ತ ಅವಕಾಶ ನೀಡಿದೆ ಎಂದು ಅರ್ಥ ಎಂದು ಆರೋಪಿಸಿದರು.

ರೈತನ ಆತ್ಮಹತ್ಯೆಯನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದಕ್ಕೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ರೈತ ಸಮುದಾಯ ಮತ್ತು ಸಾರ್ವಜನಿಕರು ಸರ್ಕಾರವನ್ನು ಶಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT