ಡಿಸಿಎಂ ಡಿ.ಕೆ ಶಿವಕುಮಾರ್ 
ರಾಜಕೀಯ

ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ: ಡಿಸಿಎಂ ಡಿ.ಕೆ ಶಿವಕುಮಾರ್

ನಾನು ಆರಂಭದಿಂದಲೂ ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗಗಳನ್ನು ಮಾಡಿದ್ದೇನೆ. ದಿ. ಎನ್. ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತ್ಯಾಗ ಮಾಡಿದ್ದೇನೆ ಎಂದರು.

ಬೆಳಗಾವಿ: ಪಕ್ಷದ ಒಳಜಗಳ ಅಥವಾ ಯಾರೊಂದಿಗೂ ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಒಳಜಗಳದ ಕುರಿತು ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದರು.

“ನಾನು ಆರಂಭದಿಂದಲೂ ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗಗಳನ್ನು ಮಾಡಿದ್ದೇನೆ. ದಿ. ಎನ್. ಧರಂ ಸಿಂಗ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ತ್ಯಾಗ ಮಾಡಿದ್ದೇನೆ ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯ ಸಮಯದಲ್ಲಿಯೂ ಸಹ, ನಾನು ಹಿಂದೆ ಸರಿದು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ಅವರು ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬಂದಿದ್ದೇನೆ. ಮುಂದೆಯೂ ತ್ಯಾಗ ಮಾಡುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದರು.

“ಒಳಜಗಳದ ಬಗ್ಗೆ ಎಲ್ಲಾ ಸುದ್ದಿಗಳು ಸುಳ್ಳು. ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಾವು ಸಾಕಷ್ಟು ಶ್ರಮಿಸಿದ್ದೇವೆ. ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಬಂಡಾಯವಿಲ್ಲ ಎಂದು ನಾನು ನಿಮಗೆ ಹೇಳುತ್ತಿದ್ದೇನೆ. ಒಳಜಗಳದ ವರದಿಗಳು ಆಧಾರರಹಿತ. ಪಕ್ಷದಲ್ಲಿ ಯಾರೊಂದಿಗೂ ನನಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ” ಎಂದು ಡಿಸಿಎಂ ಸ್ಪಷ್ಟಪಡಿಸಿದರು.

“ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಾನು, ಪಕ್ಷ, ಹೈಕಮಾಂಡ್ ಉಂಟು. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ, ಶಿವಕುಮಾರ್ ಅವರನ್ನು ಅಧಿಕಾರದಿಂದ ಹೊರಗಿಡಲಾಯಿತು ಮತ್ತು ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಯಿತು, ಅದೇ ರೀತಿ, ಜೆಡಿಎಸ್ ಜೊತೆ ರಚನೆಯಾದ ದಿವಂಗತ ಧರಂ ಸಿಂಗ್ ಅವರ ಸರ್ಕಾರದ ಸಮಯದಲ್ಲಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶಿವಕುಮಾರ್ ಅವರಿಗೆ ಪ್ರಮುಖ ಸ್ಥಾನ ಸಿಗದಂತೆ ನೋಡಿಕೊಂಡರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT