ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ತ್ಯಾಗದ ಕುರಿತ ಖರ್ಗೆ ಮಾತು ನನಗೂ ಅರ್ಥವಾಗಿಲ್ಲ; ಸಚಿವ ಪರಮೇಶ್ವರ್‌

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸೂಚನೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ನೀಡಲು ನಿರಾಕರಿಸಿದರು.

ತುಮಕೂರು: ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವ ಬಗ್ಗೆ ಹೇಳಿದ ಮಾತು ನನಗೂ ಅರ್ಥ ಆಗಿಲ್ಲ, ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಬುಧವಾರ ಹೇಳಿದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸೂಚನೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ನೀಡಲು ನಿರಾಕರಿಸಿದರು, ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತ್ಯಾಗ ಮನೋಭಾವನೆ ಕುರಿತು ನೀಡಿದ ಹೇಳಿಕೆಗೆ ವ್ಯಾಖ್ಯಾನ ನೀಡಿದರು.

ಅವರು ಹೇಳಿದ್ದು ನನಗೂ ಅರ್ಥವಾಗಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ನವರು ತ್ಯಾಗ ಮಾಡಿದ್ದಾರೆ. ಅಂಥಹ ತ್ಯಾಗ ಬಲಿದಾನ ಈಗಿನ ಆಧುನಿಕ ಸಮಾಜದಲ್ಲಿ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ಹೇಳಿರಬಹುದು ಎಂದು ಹೇಳಿದರು.

ಮೋತಿಲಾಲ್ ನೆಹರೂರವರು ತಮ್ಮ ಇಡೀ ಆಸ್ತಿಯನ್ನು ದಾನ ಮಾಡಿದ್ದರು, ಈಗಿನ ಸಮಾಜದಲ್ಲಿ ತ್ಯಾಗದ ಮನೋಭಾವನೆ ಕಮ್ಮಿಯಾಗಿದೆ, ಕೇವಲ ಕಾಂಗ್ರೆಸ್ಸಿಗರನ್ನು ದೂರುವುದು ಸರಿಯಲ್ಲ. ಇಡೀ ಸಮಾಜದಲ್ಲಿ ತ್ಯಾಗ ಮನೋಭಾವ ಕಡಿಮೆ ಆಗಿದೆ. ಅದರಲ್ಲೂ ಸ್ವಾಭಾವಿಕವಾಗಿ ಕಾಂಗ್ರೆಸ್‌ನಲ್ಲೂ ತ್ಯಾಗ ಮನೋಭಾವ ಕಡಿಮೆ ಆಗಿದೆ ಎಂದು ತಿಳಿಸಿದರು.

ಮೈಕ್ರೊ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಕ್ರಮ

ಮೈಕ್ರೋ ಫೈನಾನ್ಸ್ ನವರಿಂದ ಸಾರ್ವಜನಿಕರಿಗೆ ಕಿರುಕುಳ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಯಾರೇ ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಕೆಲ ಮೈಕ್ರೋ ಫೈನಾನ್ಸ್ ನವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಇದನ್ನು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಪರವಾನಗಿ ಇಲ್ಲದ ಹಣಕಾಸು ಸಂಸ್ಥೆಗಳ ಬಗ್ಗೆ ಸರ್ವೇ ಮಾಡಬೇಕಿದೆ ಎಂದು ಹೇಳಿದರು.

ಕಾರಣಾಂತರಗಳಿಂದ ನಿನ್ನೆ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳ ಸಂಸರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಶ್ರೀಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಲಾಗಿದೆ. ಶ್ರೀಗಳ ಸಾಧನೆ ಇಡೀ ಜಗತ್ತಿಗೆ ಗೊತ್ತಿದೆ. ಅವರನ್ನು ನಾವು ಸರಿಸಬೇಕು. ಪುಣ್ಯ ಸರಣೆ ದಿನವನ್ನು ದಾಸೋಹ ದಿನವನ್ನಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸರ್ಕಾರದ ಹಂತದಲ್ಲಿ ಚರ್ಚೆ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT