ಇಕ್ಬಾಲ್ ಹುಸೇನ್‍ 
ರಾಜಕೀಯ

ಸಿಎಂ ಬದಲಾಯಿಸದಿದ್ರೆ ಮುಂದೆ ಕಷ್ಟ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್‍ಗೆ ಶೋಕಾಸ್ ನೋಟಿಸ್

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗೆ "ಅಸಮಾಧಾನ" ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒನ್ ಟು ಒನ್ ಸಭೆ ನಡೆಸುತ್ತಿರುವ ಸಮಯದಲ್ಲೇ ಇಕ್ಬಾಲ್ ಹುಸೇನ್ ಅವರು ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಳಿದ ಅವಧಿಗೆ ಡಿಕೆ ಶಿವಕುಮಾರ್ ಗೆ ಅವಕಾಶ ನೀಡಬೇಕು. ಇದು ನನ್ನೊಬ್ಬನ ಇಚ್ಚೆ ಅಲ್ಲ. ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದು, ಈ ಕ್ಷಣಕ್ಕಾಗಿ ಅನೇಕ ಶಾಸಕರು ಕಾಯುತ್ತಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದ್ದರು.

ಈಗ ಮುಖ್ಯಮಂತ್ರಿ ಬದಲಾವಣೆಯಾಗದಿದ್ರೆ ಮುಂದೆ ಕಷ್ಟವಾಗಲಿದೆ. 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಇಕ್ಬಾಲ್ ಹುಸೇನ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!