ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಮತ್ತು ಡಿಕೆ.ಶಿವಕುಮಾರ್. 
ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಹಾಯ ಮಾಡಿದ್ದಾರೆ, ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಿ; ಹೈಕಮಾಂಡ್'ಗೆ ಮಾಗಡಿ ಶಾಸಕ ಮನವಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕತೆ ಬರಲು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡಿದ್ದಾರೆ. ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಬೇಕು.

ಬೆಂಗಳೂರು: ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಕಾಂಗ್ರೆಸ್ ಪಕ್ಷದ ಶಾಸಕರು ಕುಂದುಕೊರತೆಗಳನ್ನು ಆಲಿಸುವ ಕಸರತ್ತನ್ನು ಸೋಮವಾರ ಪ್ರಾರಂಭಿಸಿದ್ದು, ಈ ನಡುವಲ್ಲೇ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸುವಂತೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕತೆ ಬರಲು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡಿದ್ದಾರೆ. ಅವರನ್ನು ಸಿಎಂ ಹುದ್ದೆಗೆ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

ಏತನ್ಮಧ್ಯೆ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಶಾಸಕ ರಾಜು ಕಾಗೆ ಸೇರಿದಂತೆ ಇತರರು ಮಂಗಳವಾರ ಸುರ್ಜೆವಾಲಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸೋಮವಾರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಸುರ್ಜೆವಾಲಾ ಅವರನ್ನು ಬೀದರ್‌ ಜಿಲ್ಲೆಯ ನಾಯಕರಾದ ಮಾಜಿ ಶಾಸಕರು ರಾಜಶೇಖರ್ ಪಾಟೀಲ್ ಮತ್ತು ಅರವಿಂದ್ ಕುಮಾರ್ ಅರಳಿ ಅವರು ಭೇಟಿ ಮಾಡಿದರು.

ಭೇಟಿ ವೇಳೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಾರ್ಯವೈಖರಿಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವರು ಸಮಯ ಕೇಳಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT