ಡಿಕೆ ಶಿವಕುಮಾರ್- ಇಕ್ಬಾಲ್ ಹುಸೇನ್ 
ರಾಜಕೀಯ

ಡಿಕೆಶಿಗೆ 100 ಶಾಸಕರ ಬೆಂಬಲ; ಈಗ ಸಿಎಂ ಬದಲಾಯಿಸದಿದ್ರೆ ಮುಂದೆ ಕಷ್ಟ: ಪಕ್ಷಕ್ಕೆ ಶಾಸಕ ಇಕ್ಬಾಲ್ ಹುಸೇನ್ ಎಚ್ಚರಿಕೆ!

ಹಾಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಳಿದ ಅವಧಿಗೆ ಡಿಕೆ ಶಿವಕುಮಾರ್ ಗೆ ಅವಕಾಶ ನೀಡಬೇಕು. ಇದು ನನ್ನೊಬ್ಬನ ಇಚ್ಚೆ ಅಲ್ಲ.

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ "ಅಸಮಾಧಾನ" ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒನ್ ಟು ಒನ್ ಸಭೆ ಮುಂದುವರೆಸಿರುವಂತೆಯೇ ಡಿಕೆ ಶಿವಕುಮಾರ್ ಪರವಾಗಿರುವ 100 ಶಾಸಕರು, ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಹಾಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಳಿದ ಅವಧಿಗೆ ಡಿಕೆ ಶಿವಕುಮಾರ್ ಗೆ ಅವಕಾಶ ನೀಡಬೇಕು. ಇದು ನನ್ನೊಬ್ಬನ ಇಚ್ಚೆ ಅಲ್ಲ. ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದು, ಈ ಕ್ಷಣಕ್ಕಾಗಿ ಅನೇಕ ಶಾಸಕರು ಕಾಯುತ್ತಿದ್ದಾರೆ ಎಂದು ಅವರು ತಿಳಿಸದ್ದಾರೆ.

ಅವರು ಉತ್ತಮ ಆಡಳಿತ ಬಯಸಿದ್ದು, ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಬೇಕು ಎಂಬುದು ಅವರ ಆಪೇಕ್ಷೆಯಾಗಿದೆ. ಹಾಗಾಗೀ ಅವರ ಪರವಾಗಿ ನಿಲ್ಲಲು ಸಿದ್ಧರಾಗಿದ್ದಾರೆ. ಈಗ ಮುಖ್ಯಮಂತ್ರಿ ಬದಲಾವಣೆಯಾಗದಿದ್ರೆ 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಸುರ್ಜೇವಾಲ ಜೊತೆಗಿನ ಇಂದಿನ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಈಗ ಮುಖ್ಯಮಂತ್ರಿ ಬದಲಾವಣೆಯಾಗದಿದ್ರೆ 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಪಕ್ಷದ ಹಿತದೃಷ್ಟಿಯಿಂದ ಇದು ಈಗ ಅಗತ್ಯವಾಗಿದೆ ಎಂದರು.

ಸಿಎಂ ಸ್ಥಾನದ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹುಸೇನ್, ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದೆ. ನಾವು ಯಾವಾಗಲೂ ಹೈಕಮಾಂಡ್ ಗೌರವಿಸುತ್ತೇವೆ. ಆದರೆ, ನಾವು ವಾಸ್ತವಾಂಶವನ್ನು ಹೇಳಬೇಕಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT