ಲಕ್ಷ್ಮೀ ಹೆಬ್ಬಾಳ್ಕರ್ 
ರಾಜಕೀಯ

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ: ಮಹಿಳೆಯರ ನಿಂದಿಸುವುದೇ BJP ಕೆಲಸ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿಗರ ಮನಸ್ಥಿತಿ ಎಂಥಹದ್ದು ಎಂಬುದನ್ನು ತೋರಿಸುತ್ತದೆ.

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿಗರ ಮನಸ್ಥಿತಿ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ರವಿಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ತಿಳಿಸಿದರು.

ಇದೇ ವೇಳೆ ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!