ಬಿಜೆಪಿ (ಸಂಗ್ರಹ ಚಿತ್ರ) online desk
ರಾಜಕೀಯ

ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರದ ವಿರುದ್ಧ BJP ಟೀಕೆ, ಮುಜುಗರ ತಂದ ರಾಯರೆಡ್ಡಿ ಹೇಳಿಕೆ

ಗ್ಯಾರಂಟಿಯಿಂದ ಅಭಿವೃದ್ಧಿಗೆ ತೊಂದರೆ ಆಗಿಲ್ಲವೆಂದು ಬಡಾಯಿ ಕೊಚ್ಚಿಕೊಂಡು ಬರುತ್ತಿದ್ದ ಕಾಂಗ್ರೆಸ್ ಸರ್ಕಾರ ರಾಯರೆಡ್ಡಿ ಹೇಳಿಕೆಗೆ ಏನು ಹೇಳುತ್ತದೆ?

ಬೆಂಗಳೂರು: ನಿಮಗೆ ಅಕ್ಕಿ ಬೇಡ, ಇನ್ನೊಂದು ಬೇಡ ಎಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡುತ್ತೇವೆಂಬ ಕಾಂಗ್ರೆಸ್​ಪಕ್ಷದ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ನೀಡಿರುವ ಹೇಳಿಕೆ ಸರ್ಕಾರಕ್ಕೆ ಮುಜುಗರ ತಂದಿದ್ದು, ಈ ನಡುವೆ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ಗ್ಯಾರಂಟಿಯಿಂದ ಅಭಿವೃದ್ಧಿಗೆ ತೊಂದರೆ ಆಗಿಲ್ಲವೆಂದು ಬಡಾಯಿ ಕೊಚ್ಚಿಕೊಂಡು ಬರುತ್ತಿದ್ದ ಕಾಂಗ್ರೆಸ್ ಸರ್ಕಾರ ರಾಯರೆಡ್ಡಿ ಹೇಳಿಕೆಗೆ ಏನು ಹೇಳುತ್ತದೆ? ಎಂದು ಪ್ರಶ್ನಿಸಿದೆ.

ಹಳ್ಳಿಗಳಿಗೆ ರಸ್ತೆ ಬೇಕಾ? ಹಾಗಾದ್ರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಸಿಎಂ ಅರ್ಥಿಕ ಸಲಹೆಗಾರರು, ಕಾಂಗ್ರೆಸ್ ಹಿರಿಯ ಶಾಸಕರಾದ ಬಸವರಾಜ ರಾಯರೆಡ್ಡಿ ನೇರವಾಗಿ ಒಪ್ಪಿಕೊಂಡಿದ್ದಾರೆ. ಮಹಾದೇವಪ್ಪನಿಗೂ ಫ್ರೀ, ಕಾಕಾ ಪಾಟೀಲನಿಗೂ ಫ್ರೀ ಎಂದು ಅಬ್ಬರಿಸಿ ಬೊಬ್ಬಿರಿದವರು ಇಂದು ಬಿಲ ಸೇರಿದ್ದಾರೆ.

ಮರ್ಪಕವಾಗಿ ಯಾವ ಗ್ಯಾರಂಟಿಯೂ ರಾಜ್ಯದಲ್ಲಿ ಅನುಷ್ಠಾನವಾಗಿಲ್ಲ, ಅಭಿವೃದ್ಧಿಯಂತೂ ರಾಜ್ಯದ ಜನತೆಗೆ ತಿರುಕನ ಕನಸಾಗಿದೆ. ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಗೆ ಸ್ವತಃ ಆಡಳಿತ ಪಕ್ಷದ ಶಾಸಕರೇ ಥಂಡಾ ಹೊಡೆದಿದ್ದಾರೆಂದು ಟೀಕೆ ಮಾಡಿದೆ.

ಏತನ್ಮಧ್ಯೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ರಾಯರೆಡ್ಡಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

'ಬಡ' ಸರ್ಕಾರ ಎಂದು ರಾಯರೆಡ್ಡಿ ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಈ‌ ಸರ್ಕಾರದಲ್ಲಿ ಅಭಿವೃದ್ಧಿಯೇ ಇಲ್ಲ ಎಂದು ರಾಯರೆಡ್ಡಿ ಹೇಳಿದ್ದಾರೆ, 2 ಸಾವಿರ ಬೇಕೋ ರೋಡ್ ಬೇಕೋ‌ ಎಂದಿದ್ದಾರೆ ಅವರು, ಸತ್ಯವನ್ನೇ ಹೇಳಿದ್ದಾರೆ. ನಮ್ಮ ಸರ್ಕಾರ ಬಂದರೆ ಅವರಿಗೆ ಪ್ರಶಸ್ತಿ ಕೊಡುತ್ತೇವೆ, ಸತ್ಯವಾನ್‌ ರಾಯರೆಡ್ಡಿ ಪ್ರಶಸ್ತಿ ಕೊಡುತ್ತೇವೆ. ಜನರಿಗೆ ಚಿಪ್ಪು ಕೊಟ್ಟು ಹೋಗುವ ಸರ್ಕಾರ ಇದು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT