ಮೈಸೂರು: ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿನಿಂದ ದೂರ ಉಳಿದಿದ್ದಾರೆ. ಆದರೆ ಅವರನ್ನು ಮನವೊಲಿಸುವ ಪ್ರಯತ್ನ ಪಕ್ಷದ ಹಿರಿಯರು ಮಾಡುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಅವರ ಪುತ್ರ ಶಾಸಕ ಜಿ.ಡಿ. ಹರೀಶ್ ಗೌಡ ತಿಳಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿನಿಂದ ದೂರ ಉಳಿದಿದ್ದಾರೆ. ನಾನು ಜೆಡಿಎಸ್‌ನಲ್ಲಿದ್ದೇನೆ ಮತ್ತು ಜೆಡಿಎಸ್‌ನಲ್ಲಿಯೇ ಮುಂದುವರೆಯುತ್ತೇನೆ. ಕಾಂಗ್ರೆಸ್ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ನನ್ನ ಜನರು ನನ್ನನ್ನು ಜೆಡಿಎಸ್‌ನಿಂದ ಗೆಲ್ಲಿಸಿದ್ದಾರೆ. ಅವರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ ಎಂದರು.
ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಮಾಡುವುದು ನಮ್ಮ ಉದ್ದೇಶ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನು ತೊರೆಯುವುದಿಲ್ಲ . ಜನರು ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂದು ಅವರು ಹೇಳಿದರು.
ಜೆಡಿಎಸ್ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು. ಆಗಸ್ಟ್‌ನಲ್ಲಿ ನಿಖಿಲ್ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ದೇವೇಗೌಡರ ನಂತರ ಕುಮಾರಸ್ವಾಮಿ ಪಕ್ಷವನ್ನು ಹೇಗೆ ಮುನ್ನಡೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುನ್ನಡೆಸುತ್ತಾರೆ ಎಂದರು.
ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಬಯಸುತ್ತಿದ್ದಾರೆ. "ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು" ಎಂದು ಹರೀಶ್ ಗೌಡ ಹೇಳಿದ್ದಾರೆ. ದೇವೇಗೌಡರಿಗಾಗಲಿ, ಕುಮಾರಸ್ವಾಮಿ ಅವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ ಇಲ್ಲ. ಆದರೆ ಜೆಡಿಎಸ್ ಕಾರ್ಯಕರ್ತರಿಗೆ ಈ ಆಸೆ ಇದೆ.
ಮೈಸೂರು ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ನೂರಕ್ಕೆ ನೂರರಷ್ಟು ಅಕ್ರಮ ನಡೆದಿದ್ದು, ಈ ಕುರಿತು ಸಹಕಾರ ಸಚಿವ ರಾಜಣ್ಣ ಅವರೇ ಒಪ್ಪಿಕೊಂಡಿರುವುದಾಗಿ ಹರೀಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆಯಲ್ಲಿ ಎಲ್ಲೆಲ್ಲಿ ಅಕ್ರಮ ಮತಗಳು ಸೇರಿವೆ ಎಂಬುದರ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದಿದ್ದು, ಆ ಕ್ಷೇತ್ರಗಳಲ್ಲಿ ಮರುಚುನಾವಣೆ ನಡೆಸಬೇಕೆಂದು ನಾವು ನ್ಯಾಯಾಲಯದಲ್ಲಿ ಕೇಳಲಿದ್ದೇವೆ ಎಂದು ಹೇಳಿದರು.