ಡಿ.ಕೆ ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿ ಛೇಡಿಸಿದ ಡಿ.ಕೆ ಶಿವಕುಮಾರ್

ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು.

ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಹೇಳಿದರು.

ನಾಲ್ಕು ಎಂಎಲ್ ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂದು ಕೇಳಿದಾಗ, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ ಎಂದು ಹೇಳಿದರು. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ ಎಂದು ತಿಳಿಸಿದರು.

ಬೀದರ್ ನ ಸಣ್ಣ ನೀರಾವರಿ ಇಲಾಖೆಯ ಎಫ್ ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ” ಎಂದರು. ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್ ಗೆ ಪ್ರಾಮುಖ್ಯತೆ ನೀಡುತ್ತೇವೆ ಎಂದು ಹೇಳಿದರು. ಕನ್ನಡ ಪರೀಕ್ಷೆ ಅಂಕಗಳನ್ನು 125 ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು” ಎಂದರು.

ಇದಕ್ಕೆ ಎರಡು- ಮೂರು ದಿನದಲ್ಲಿ ಟನಲ್ ರಸ್ತೆಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್ ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲಾ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT