ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ

ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

ಬೆಂಗಳೂರು: ಬಿಜೆಪಿಯ ಮಾತೃ ಸಂಘಟನೆ ಎಂದು ಗುರುತಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 75ವರ್ಷ ವಯಸ್ಸಾದವರು ಇತರರಿಗೆ ಅವಕಾಶ ಮಾಡಿಕೊಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ವರ್ಷದ ಕೊನೆಯಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಅನುಮಾನ ಹುಟ್ಟಿಸಿದೆ. ಪ್ರಧಾನಿ ಮೋದಿ ಅವರ ವಯಸ್ಸಿನ ಮೇಲೆ ಕೇಂದ್ರೀಕರಿಸಬಾರದು. ಬದಲಿಗೆ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಮೇಲೆ ಕೇಂದ್ರೀಕರಿಸಬೇಕು ಎಂದಿದ್ದಾರೆ.

ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ ಎಂದು ಹೇಳಿದ್ದಾರೆ.

ನಾವು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿಲ್ಲ. ನಮಗೆ ಪ್ರಧಾನಿ ವಯಸ್ಸಿನ ಬಗ್ಗೆ ಆಸಕ್ತಿ ಇಲ್ಲ, ದೇಶಕ್ಕೆ ಅವರು ನೀಡಿರುವ ಕೊಡುಗೆ ಮತ್ತು ಕೆಲಸದ ಬಗ್ಗೆ ಆಸಕ್ತಿಯಿದೆ. ಆದರೆ ಈ ಹಿಂದೆ ರಾಜಕಾರಣಿಗಳಿಗೆ 75 ವರ್ಷ ವಯೋಮಿತಿ ಎಂದು ಮೋದಿ ಅವರೇ ಹೇಳಿದ್ದರು. ಒಂದೆರಡು ತಿಂಗಳಲ್ಲಿ 75 ನೇ ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರೆಯೇ ಎಂಬುದು ಜನರಲ್ಲಿ ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರಿಯಾಂಕ್ ಖರ್ಗೆ ANI ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಮಧ್ಯೆ ಮಾತನಾಡಿದ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್,, ಬಹುಶಃ ಪ್ರಧಾನಿ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಸುಳಿವನ್ನು ಮೋಹನ್ ಭಾಗವತ್ ನೀಡಿದ್ದಾರೆ. ಬಿಜೆಪಿ ಆರೆಸ್ಸೆಸ್‌ನ ರಾಜಕೀಯ ವಿಭಾಗವಾಗಿದೆ. ಆರ್‌ಎಸ್‌ಎಸ್ ತೆಗೆದುಕೊಳ್ಳುವ ನಿರ್ಧಾರಗಳನ್ನು ಅದು ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT