ಸಲೀಂ ಅಹ್ಮದ್-ರಾಹುಲ್ ಗಾಂಧಿ 
ರಾಜಕೀಯ

ನವೆಂಬರ್​ನಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ; ಹೊಸಬರಿಗೆ ಅವಕಾಶ: ಸಲೀಂ ಅಹ್ಮದ್

ನವೆಂಬರ್​ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಹಾವೇರಿ: ನವೆಂಬರ್​ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಸಚಿವ ಸ್ಥಾನ ಕಳೆದುಕೊಂಡವರಿಗೆ ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನ ನೀಡಲಾಗುತ್ತದೆ. ಇನ್ನು ಈ ಬಾರಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅಂತಿಮವಾಗಿ ಹೈಕಮಾಂಡ್ ಮತ್ತು ಸಿಎಂ ನಿರ್ಧರಿಸುತ್ತಾರೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಕೆಲ ಸಚಿವರು ಕೇಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡದಂತೆ ತಿಳಿಸಿದ್ದಾರೆ. ಈ ವಿಷಯದ ಕುರಿತಂತೆ ನಾವು ಏನೂ ಮಾತನಾಡಲ್ಲ. ಬಿಜೆಪಿ ಥರ ನಮ್ಮದು ನರೇಂದ್ರ ಮೋದಿ ಪಾರ್ಟಿ ಅಲ್ಲ. ಪ್ರಜಾಪ್ರಭುತ್ವ ಇರುವ ಪಾರ್ಟಿ. ನಮ್ಮ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತವೆ. ಆ ಬಳಿಕವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!

ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿ

SCROLL FOR NEXT