ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಗ್ಯಾರಂಟಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ, ಬರಿ "ಕುರ್ಚಿ" ಬಗ್ಗೆ ಚಿಂತೆಯಾಗಿದೆ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಜೆಡಿಎಸ್ ಪಕ್ಷದ ಯಾವುದೇ ಶಾಸಕರು ಹಣ ಅಥವಾ ಅಧಿಕಾರಕ್ಕಾಗಿ ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲ.

ಚಿಕ್ಕಬಳ್ಳಾಪುರ: ರಾಜ್ಯದ ಗ್ಯಾರಂಟಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ, ಬರೀ "ಕುರ್ಚಿ" ಬಗ್ಗೆ ಚಿಂತೆಯಾಗಿದೆ. ಮಾತೆತ್ತಿದರೆ ದೆಹಲಿಗೆ ಹೋಗಿ ಕುಳಿತುಕೊಳ್ಳತ್ತಾರೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ನಡೆದ ಜೆಡಿಎಸ್ ಸದಸ್ಯತ್ವ ಅಭಿಯಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜನರ ತುರ್ತು ಅಗತ್ಯಗಳನ್ನು ನಿರ್ಲಕ್ಷಿಸಿ "ಕುರ್ಚಿ" ಹೋರಾಟದಲ್ಲಿ ನಿರತವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬರು ಮುಖ್ಯಮಂತ್ರಿ ಕುರ್ಚಿಯಲ್ಲಿ ಉಳಿಸಿಕೊಳ್ಳು ಶತಾಯಗತಾಯ ಯತ್ನ ನಡೆಸುತ್ತಿದ್ದರೆ, ಮತ್ತೊಬ್ಬರು ಕುರ್ಚಿ ಪಡೆಯಲು ಚಡಪಡಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಜೆಡಿಎಸ್ ಪಕ್ಷದ ಯಾವುದೇ ಶಾಸಕರು ಹಣ ಅಥವಾ ಅಧಿಕಾರಕ್ಕಾಗಿ ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲ. ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ "ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಸರ್ಕಾರಗಳಲ್ಲಿ ಒಂದಾಗಿದೆ. ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ. ನಾನು ಹೋದಲ್ಲೆಲ್ಲಾ ಗ್ರಾಮಸ್ಥರು ಇಂತಹ ಕಳಪೆ ಆಡಳಿತವನ್ನು ಎಂದಿಗೂ ನೋಡಿಲ್ಲ ಎಂದು ಹೇಳುತ್ತಾರೆ, ಈಡೇರಿಸದ ಚುನಾವಣಾ ಭರವಸೆಗಳನ್ನು ಕಾಂಗ್ರೆಸ್ ನೀಡಿದೆ. ಮತದಾರರನ್ನು ದಾರಿ ತಪ್ಪಿಸಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರನ್ನು ಟೀಕಿಸಿದ ನಿಖಿಲ್ ಅವರು, ಪ್ರಚಾರದ ಸಮಯದಲ್ಲಿ ಜನರಿಂದ ಪೆನ್ನು ಮತ್ತು ಪೇಪರ್ ಕೇಳಿದ್ದರು. ಜನರು ಕೊಟ್ಟಿದ್ದರು. ಆದರೆ, ಈಗ ತಮ್ಮ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಟೀಕಿಸಿದರು.

ಗೃಹಲಕ್ಷ್ಮಿ ಯೋಜನೆಯ ಕುರಿತು ಮಾತನಾಡಿ, ಕಾಂಗ್ರೆಸ್ ಸರ್ಕಾರ ಆರಂಭದಲ್ಲಿ ಮಹಿಳೆಯರಿಗೆ ಮಾಸಿಕ ಪಾವತಿಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ "ಸಾಧ್ಯವಾದಾಗ" ಪಾವತಿಸಲಾಗುವುದು ಎಂದು ಹೇಳುತ್ತಿದ್ದಾರೆ. ಮಾಸಿಕ ಹಣ ನೀಡುತ್ತೇವೆಂದು ಹೇಳಿರಲಿಲ್ಲವೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ: ಫುಟ್ಬಾಲ್ ದಿಗ್ಗಜನಿಗೆ ಅದ್ಧೂರಿ ಸ್ವಾಗತ; 70 ಅಡಿ ಎತ್ತರದ ಪ್ರತಿಮೆ ಅನಾವರಣ!

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

ಚುಮು ಚುಮು ಚಳಿಯಲಿ ಆಹಾರ ಹೀಗಿರಲಿ (ಕುಶಲವೇ ಕ್ಷೇಮವೇ)

SCROLL FOR NEXT