ಸಿದ್ದರಾಮಯ್ಯ ಮತ್ತು ಪ್ರಹ್ಲಾದ್ ಜೋಶಿ 
ರಾಜಕೀಯ

ಸಿಎಂ ಕುರ್ಚಿ ಗಲಾಟೆ ಮರೆಮಾಚಲು ರಾಜಕಾರಣದ‌ ದಾಳ‌ ಉರುಳಿಸಿರುವುದು ರಾಜ್ಯದ ದುರಂತ: ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ರಾಜ್ಯದ ಅಭಿವೃದ್ಧಿಯನ್ನು ಮರೆತ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ, ಇದೀಗ ಸಿಎಂ ಖುರ್ಚಿ ಜಗಳದಲ್ಲಿ ಮುಳುಗಿದೆ.

ಬೆಂಗಳೂರು: ಸಿಎಂ ಕುರ್ಚಿ ಗಲಾಟೆ ಮರೆಮಾಚಲು ರಾಜಕಾರಣದ‌ ದಾಳ‌ ಉರುಳಿಸಿರುವುದು ರಾಜ್ಯದ ದುರಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರು ಸೇತುವೆ ಉದ್ಘಾಟನೆ ಸಮಾರಂಭಕ್ಕೆ ತಡವಾಗಿ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಹಿನ್ನೆಲೆಯಲ್ಲಿ ಪ್ರಹ್ಲಾದ್ ಜೋಶಿಯವರು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಶರಾವತಿ ನದಿಯ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂದೂರು‌ ಸೇತುವೆಯ ಲೋಕಾರ್ಪಣೆಯನ್ನು ಶಿವಮೊಗ್ಗದ ಜನ ನಿಜಕ್ಕೂ ಹಬ್ಬದ ಸಂದರ್ಭ ಎಂದೇ ಭಾವಿಸುತ್ತಿದ್ದಾರೆ. ಆದರೆ, ಈ ಸಂದರ್ಭವನ್ನು ರಾಜಕೀಯ ದಾಳವಾಗಿ ಉರುಳಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಾಮಯ್ಯ ಮುಂದಾಗಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಹೇಳಿದ್ದಾರೆ.

ಶಿವಮೊಗ್ಗ ಕ್ಷೇತ್ರದ ‌ಲೋಕಸಭಾ ಸದಸ್ಯರಾದ ಬಿವೈ ರಾಘವೇಂದ್ರರವರು ಜುಲೈ 9 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನದ ಜೊತೆ ಪತ್ರವನ್ನು ಬರೆದಿದ್ದಾರೆ. ಅಲ್ಲದೆ, ಸಿಗಂದೂರು ಸೇತುವೆ ಕರ್ನಾಟಕದ ಹೆಮ್ಮೆ, ಜನರಿಗೆ ಅನುಕೂಲ ಹಾಗೂ ಪ್ರವಾಸಿ ಕ್ಷೇತ್ರವಾಗುವ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜುಲೈ 11 ರಂದು ಪತ್ರ ಬರೆದು ಆಹ್ವಾನಿಸಿದ್ದಾರೆ.

ರಾಜ್ಯದ ಅಭಿವೃದ್ಧಿಯನ್ನು ಮರೆತ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ, ಇದೀಗ ಸಿಎಂ ಖುರ್ಚಿ ಜಗಳದಲ್ಲಿ ಮುಳುಗಿದೆ. ಕೇಂದ್ರ ಸರ್ಕಾರದ ಅನುದಾನದಲ್ಲಿ‌ ನಿರ್ಮಾಣವಾದ ಸೇತುವೆಯನ್ನು ಸಂಭ್ರಮಿಸುವ ಬದಲು ತನ್ನ ಕುರ್ಚಿ ಉಳಿಸಿಕೊಳ್ಳುವ ಬರದಲ್ಲಿ, ಶಿಷ್ಟಾಚಾರ ನಿಯಮ ಉಲ್ಲಂಘನೆ, ನನ್ನನ್ನು ಆಹ್ವಾನಿಸಿಯೇ ಇಲ್ಲ ಎಂಬ ಸುಳ್ಳು ಹಾಗೂ ಕೆಟ್ಟ ರಾಜಕಾರಣವನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮಾಡುತ್ತಿರುವುದು ರಾಜ್ಯಕ್ಕೆ ಮಾಡುತ್ತಿರುವ ದ್ರೋಹ.

ಕರ್ನಾಟಕದ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿಯವರ ಜೊತೆ ಈ ಹಿಂದೆಯೇ ಸಂಸದರಾದ ಶ್ರೀ ಬಿವೈ ರಾಘವೇಂದ್ರರವರು ಹಾಗೂ ಅಧಿಕಾರಿಗಳು ಚರ್ಚಿಸಿ, ಉದ್ಘಾಟನೆಯ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ‌, ಉದ್ಘಾಟನೆಯ ‌ಕುರಿತು ಮುಖ್ಯಮಂತ್ರಿಗಳಿಗೂ ಮಾಹಿತಿ ರವಾನೆಯಾಗಿದೆ. ಸಿಎಂ ಕುರ್ಚಿ ಗಲಾಟೆಯನ್ನು ಮರೆಮಾಚಲು ಈ ರೀತಿಯ ರಾಜಕಾರಣದ‌ ದಾಳ‌ ಉರುಳಿಸಿರುವುದು, ರಾಜ್ಯದ ದುರಂತ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾನು ಅಂದುಕೊಂಡರೆ ಸುಲಭವಾಗಿ ಕ್ಷಣಾರ್ಧದಲ್ಲಿ ಸಂಘರ್ಷ ನಿಲ್ಲಿಸಬಲ್ಲೆ: Afghan-Pak ಯುದ್ಧದ ಬಗ್ಗೆ ಟ್ರಂಪ್

ಸನಾತನಿಗಳ ಸಹವಾಸದಿಂದ ದೂರ ಇರಿ; RSS, ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

ಢಾಕಾ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ; ಎಲ್ಲಾ ವಿಮಾನ ಹಾರಾಟ ಸ್ಥಗಿತ

ಚಲಿಸುವ ರೈಲಿನಲ್ಲಿ ಮಗುವಿಗೆ CPR ಮಾಡಿ ಜೀವ ಉಳಿಸಿದ ಸೇನಾ ಸಿಬ್ಬಂದಿ!

BBK12: ರಕ್ಷಿತಾ ಶೆಟ್ಟಿಗೆ S*** ಪದ ಬಳಸಿದ್ದೇಕೆ ಅಶ್ವಿನಿ ಗೌಡ? ಸ್ಪರ್ಧಿಗಳ ಮುಖವಾಡ ಕಳಚಿದ ಸುದೀಪ್; Video

SCROLL FOR NEXT