ಬಿ.ವೈ. ವಿಜಯೇಂದ್ರ 
ರಾಜಕೀಯ

ಬೆಂಗಳೂರಿನಲ್ಲಿ ಕಾಂಗ್ರೆಸ್ OBC ಸಲಹಾ ಮಂಡಳಿ ಸಭೆ: ಚುನಾವಣಾ ಗಿಮಿಕ್- ಬಿ.ವೈ ವಿಜಯೇಂದ್ರ!

ಹಿಂದುಳಿದ ವರ್ಗಗಳ ಅಭ್ಯುದಯ, ಅಭಿವೃದ್ಧಿ ಹಿನ್ನೆಲೆಯಲ್ಲಿ ಸಭೆ ನಡೆದಿಲ್ಲ. ಸ್ವಾತಂತ್ರ್ಯಾನಂತರ ದೇಶ ಮತ್ತು ರಾಜ್ಯವನ್ನು ಬಹುಕಾಲ ಆಳಿದ ಕಾಂಗ್ರೆಸ್ ಈ ಸಮುದಾಯಗಳ ಹಿನ್ನಡೆಗೆ ಹೊಣೆ ಹೊರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ ಬೆಂಗಳೂರಿನಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ ಚುನಾವಣಾ ಗಿಮಿಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಅಭ್ಯುದಯ, ಅಭಿವೃದ್ಧಿ ಹಿನ್ನೆಲೆಯಲ್ಲಿ ಸಭೆ ನಡೆದಿಲ್ಲ. ಸ್ವಾತಂತ್ರ್ಯಾನಂತರ ದೇಶ ಮತ್ತು ರಾಜ್ಯವನ್ನು ಬಹುಕಾಲ ಆಳಿದ ಕಾಂಗ್ರೆಸ್ ಈ ಸಮುದಾಯಗಳ ಹಿನ್ನಡೆಗೆ ಹೊಣೆ ಹೊರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಉನ್ನತಿ ಅಥವಾ ಅಭಿವೃದ್ಧಿಯ ಈ ಸಭೆಯ ಅಜೆಂಡಾ ಅಲ್ಲ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದು ಹೇಗೆ ಎಂಬುದು ನಿಜವಾದ ಅಜೆಂಡಾವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 55-60 ವರ್ಷಗಳಿಂದ ರಾಜ್ಯ ಹಾಗೂ ದೇಶ ಎರಡರಲ್ಲೂ ಆಡಳಿತ ನಡೆಸಿರುವ ಪಕ್ಷ ಕಾಂಗ್ರೆಸ್ ಆಗಿದೆ. ಈ ಸಮುದಾಯಗಳ ಅಭಿವೃದ್ಧಿ ಮ್ತು ಸಾಮಾಜಿಕ ನ್ಯಾಯ ದೊರೆಯದಿದ್ದರೆ ಯಾರು ಹೊಣೆ ಹೊರಬೇಕು? ಎಂದು ಪ್ರಶ್ನಿಸಿದರು. ದೇಶದಲ್ಲಿ ಸುಮಾರು 55 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಇದರ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಬಿಹಾರ ಚುನಾವಣೆ ಸನ್ನಿಹದಲ್ಲಿರುವಂತೆಯೇ ಎಐಸಿಸಿಯ ಒಬಿಸಿ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಭೆಗೆ ಯಾವುದೇ ಪ್ರಾಮುಖ್ಯತೆ, ಪ್ರಸ್ತುತತೆ ಇಲ್ಲ. ಇದು ಕೇವಲ ರಾಜಕೀಯ ಗಿಮಿಕ್ ಆಗಿದೆ. ಮುಂಬರುವ ಬಿಹಾರ ಚುನಾವಣೆಗೆ ಇದೊಂದು ಚುನಾವಣಾ ಗಿಮಿಕ್ ಆಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ