ಬಸವರಾಜ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಸಣ್ಣ-ಅತಿ ಸಣ್ಣ ವ್ಯಾಪಾರಸ್ಥರಿಗೆ GST ನೋಟಿಸ್ ನೀಡಿರುವುದು ಅತ್ಯಂತ ಖಂಡನೀಯ: ಸಂಸದ ಬಸವರಾಜ ಬೊಮ್ಮಾಯಿ

ರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ.

ಬೆಂಗಳೂರು: ರಾಜ್ಯ ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್'ಟಿ ನೋಟಿಸ್ ನೀಡಿರುವುದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯ್ತಿ ಇದೆ. ಆ ರಿಯಾಯಿತಿ ನಂತರ ತೆರಿಗೆ ಕಟ್ಟಬೇಕೆಂಬ ಪದ್ದತಿ ಇದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿ ಸಣ್ಣ ಬೀದಿ ಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರೆಸಿ ಅವರು ವ್ಯಾಪಾರ ಮುಚ್ಚುವ ಪರಿಸ್ಥಿತಿಗೆ ತಂದಿರುವುದು ಯಾರೂ ಕೂಡ ಒಪ್ಪಲು ಸಾಧ್ಯವಿಲ್ಲ. ಸಂಬಂಧ ಪಟ್ಟ ಸಣ್ಣ ವ್ಯಾಪಾರಿಗಳ ಪ್ರತಿನಿದಿಗಳನ್ನು ಕರೆದು ಚರ್ಚೆ ಮಾಡಿ ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ ಅದೇ ರೀತಿ ಅವರಿಗೂ ಸಹಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಕೂಡ ಅನ್ವಯಿಸಬೇಕೆಂದು ಆಗ್ರಹ ಮಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ತರಿಗೆ ಪರಿಹಾರ ಒದಗಿಸಬೇಕೆಂದು ನನ್ನ ಆಗ್ರಹ.

ರಾಜ್ಯದಲ್ಲಿ ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೇಯ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT