ಡಿಕೆ.ಸುರೇಶ್ 
ರಾಜಕೀಯ

ನಿಮ್ಮ ರಾಜಕೀಯ ದ್ವೇಷಕ್ಕೆ ಸಾಧನವಾಗಿ ED ಬಳಸಿಕೊಳ್ಳುವುದನ್ನು ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಡಿ.ಕೆ ಸುರೇಶ್ ಆಗ್ರಹ

ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಹಲವು ಬಾರಿ ಕೇಂದ್ರ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು: ನಿಮ್ಮ ರಾಜಕೀಯ ದ್ವೇಷಕ್ಕೆ ಜಾರಿ ನಿರ್ದೇಶನಾಲಯವನ್ನು ಸಾಧನವಾಗಿ ಬಳಕೆ ಮಾಡುವುದನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧದ ಇಡಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ತೀರ್ಪು ಮಹತ್ವದ್ದಾಗಿದೆ. ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಹಲವು ಬಾರಿ ಕೇಂದ್ರ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಿದರು.

ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಇಡಿಯನ್ನು ಸಾಧನವಾಗಿ ಬಳಕೆ ಮಾಡುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕವಾದರೂ ಸೇಡಿನ ರಾಜಕೀಯವನ್ನು ನಿಲ್ಲಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್‌ಗೆ ತಲೆನೋವಾದ ಆಯ್ಕೆ!

T20 World Cup 2026: 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ'; IND vs PAK ಪಂದ್ಯಕ್ಕೂ ಮುನ್ನ ಪಾಕ್ ಮಾಜಿ ಕ್ರಿಕೆಟಿಗ ಹೇಳಿಕೆ

SCROLL FOR NEXT