ಡಿಸಿಎಂ ಡಿಕೆ ಶಿವಕುಮಾರ್ online desk
ರಾಜಕೀಯ

ಮಹದಾಯಿ: 'ಸಂಸದ ಸ್ಥಾನಕ್ಕಾಗಿ ರಾಜ್ಯವನ್ನೇ ಮಾರಿಕೊಳ್ಳಲು ಸಾಧ್ಯವಿಲ್ಲ'; BJP ಸಂಸದರ ವಿರುದ್ಧ DK Shivakumar ವಾಗ್ದಾಳಿ; Video

ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ ಎಂದು ಡಿಸಿಎಂ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ.ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾ ಆಗಿದೆ. ಟೆಂಡರ್ ಕೂಡ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು. ಇದರ ಮಧ್ಯೆ ಅರಣ್ಯ ಇಲಾಖೆ ಏನೋ ನೊಟೀಸ್‌ ಕೊಟ್ಟಿದೆ. ನಾವು ಅದಕ್ಕೆ ಎಲ್ಲಾ ಉತ್ತರ ಕೊಡುತ್ತೇವೆ. ಮಹದಾಯಿ ವಿಷಯದಲ್ಲಿ ನಮ್ಮ ಕೆಲಸ ನಾವು ಪ್ರಾರಂಭ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಂಸದ ಸ್ಥಾನಕ್ಕಾಗಿ ರಾಜ್ಯವನ್ನು ಮಾರಿಕೊಳ್ಳೋದಕ್ಕೆ ಆಗಲ್ಲ: ಸಂಸದರ ವಿರುದ್ಧ ಡಿಸಿಎಂ ಗರಂ

ಇದೇ ವೇಳೆ ಮಹದಾಯಿ ವಿಷಯವಾಗಿಯೂ ಅಸಮಾಧಾನ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, ಇದು ನಮ್ಮ ರಾಜ್ಯದ ಸಂಸದರ ಸ್ವಾಭಿಮಾನದ‌‌ ಪ್ರಶ್ನೆ. ಮಹದಾಯಿ ವಿಷಯವಾಗಿ ಈವರೆಗೂ ಸಂಸದರು ಬಾಯಿ ಮುಚ್ಚಿಕೊಂಡಿರೋದೇ ತಪ್ಪು. ಒಂದು MP ಸೀಟಿಗೋಸ್ಕರ ನಾವು ರಾಜ್ಯವನ್ನು ಮಾರಿಕೊಳ್ಳೋಕೆ ಸಾಧ್ಯವಿಲ್ಲ. 28 ಸಂಸದರು, 12 ಜನ ರಾಜ್ಯಸಭೆ ಸದಸ್ಯರು ಈ ಬಗ್ಗೆ ಮಾತಾಡಬೇಕು. ನಾನು ದೆಹಲಿಗೆ ಹೋಗಿ ಸಂಸದರ ಜೊತೆ ಮಾತಾಡುತ್ತೇನೆ. ಪ್ರಧಾನಿ, ಜಲಶಕ್ತಿ ಮಂತ್ರಿಗಳಿಗೂ ಸಮಯ ‌ಕೇಳುತ್ತೇನೆ. ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT