ಬೆಳಗಾವಿ: ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಚಾರಕ್ಕಾಗಿ ಪ್ರಮುಖ ರಾಜಕೀಯ ನಾಯಕರು ಕಣಕ್ಕಿಳಿದಿದ್ದಾರೆ.
1919 ರಲ್ಲಿ ಸ್ಥಾಪನೆಯಾದ ರಾಜ್ಯದ ಪ್ರಸಿದ್ಧ ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾದ ಮತ್ತು ಬೆಳಗಾವಿ ಪ್ರದೇಶದಲ್ಲಿ ಭಾರಿ ರಾಜಕೀಯ ಮಹತ್ವವನ್ನು ಪಡೆದಿರುವ ಡಿಸಿಸಿ ಬ್ಯಾಂಕ್ ಮೇಲೆ ಹಿಡಿತ ಸಾಧಿಸಲು ತಮ್ಮ ರಾಜಕೀಯ ಕಾರ್ಯತಂತ್ರಗಳನ್ನು ರೂಪಿಸಲು ನಾಯಕರ ಗುಂಪುಗಳು ನಿಯಮಿತವಾಗಿ ಸಭೆಗಳನ್ನು ನಡೆಸುತ್ತಿವೆ.
ಬೆಳಗಾವಿಯ ಹೆಚ್ಚಿನ ಪ್ರಸಿದ್ಧ ರಾಜಕೀಯ ನಾಯಕರು ಬಹಳ ಸಮಯದಿಂದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚುನಾವಣೆಗೆ ಮುಂಚಿತವಾಗಿ, ಸಿದ್ಧತೆ ನಡೆಸಲು ಮಂಗಳವಾರ ಚಿಕ್ಕೋಡಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದರೂ, ಮೊದಲ ಹಂತದ ಪ್ರಚಾರ ಈಗಾಗಲೇ ಆರಂಭವಾಗಿದೆ.
ಈ ಬಿಸಿಸಿ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ನಮ್ಮ ಗುಂಪು ಮತ್ತೊಂದು ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂಬ ವಿಶ್ವಾಸ ನಮಗಿದೆ" ಎಂದು ಬಾಲಚಂದ್ರ ಜಾರಕಿಹೊಳಿ ಸಭೆಯಲ್ಲಿ ಹೇಳಿದರು.
ವಿರೋಧ ಪಕ್ಷದಲ್ಲಿ ಯಾರೇ ಇದ್ದರೂ, ಅವರನ್ನು ಪರಿಣಾಮಕಾರಿಯಾಗಿ ಎದುರಿಸಲು ನಾವು ಸಿದ್ಧರಿದ್ದೇವೆ. ಅಧಿಕಾರವನ್ನು ಉಳಿಸಿಕೊಳ್ಳುವ ಮತ್ತು ರೈತರ ಹಿತಾಸಕ್ತಿ ಕಾಪಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಚುನಾವಣೆ ಪಕ್ಷಾತೀತವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ಸಭೆಯಲ್ಲಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ್ ಕುಲಗೋಡೆ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ್ ಮತ್ತು ಅರವಿಂದ್ ಪಾಟೀಲ್, ಬಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ, ಅಪ್ಪಾಸಾಹೇಬ್ ಜೊಲ್ಲೆ, ವಿಕ್ರಮ್ ಇನಾಮದಾರ್, ಶಂಕರಗೌಡ ಪಾಟೀಲ್ ಮತ್ತು ಇತರ ಅನೇಕ ನಾಯಕರು ಭಾಗವಹಿಸಿದ್ದರು.