ಬಿವೈ ವಿಜಯೇಂದ್ರ 
ರಾಜಕೀಯ

'ಮತ ಕಳ್ಳತನ'ದ ವಿರುದ್ಧ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ದೊಡ್ಡ 'ಜೋಕ್'

ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವುದು ದೊಡ್ಡ 'ಜೋಕ್' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಟೀಕಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ರಾಹುಲ್ ಗಾಂಧಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ನಾವು(ಬಿಜೆಪಿ) ಕರ್ನಾಟಕದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುವ ಅವಶ್ಯಕತೆ ಇರಲಿಲ್ಲ ಎಂದರು. ಕಾಂಗ್ರೆಸ್ 66 ಶಾಸಕ ಸ್ಥಾನ ಪಡೆದರೆ, ಬಿಜೆಪಿ 136 ಸ್ಥಾನದಿಂದ ಅಧಿಕಾರಕ್ಕೆ ಬರುತ್ತಿತ್ತು ಎಂದು ಹೇಳಿದರು.

ಈ ವಿಚಾರದಲ್ಲಿ ರಾಹುಲ್ ಗಾಂಧಿ ದಾರಿ ತಪ್ಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕಾಗಿ ರಾಜ್ಯದ ಮತದಾರರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ರಾಹುಲ್ ಗಾಂಧಿಯವರ ನಡವಳಿಕೆ ಗಮನಿಸಿದರೆ ಅಯ್ಯೋ ಪಾಪ ಅನಿಸುತ್ತದೆ. ಚುನಾವಣಾ ಆಯೋಗದ ಬಗ್ಗೆಯೂ ಅನುಮಾನ, ಸುಪ್ರೀಂ ಕೋರ್ಟಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದರು. ನೀವು ಅದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಿ ಎಂದು ಆಗ್ರಹಿಸಿದರು.

ರಾಹುಲ್ ಗಾಂಧಿಗೆ ಈ ಅಸಂಬದ್ಧ ವಿಚಾರವನ್ನು ಯಾರು ಹೇಳಿ ಕೊಟ್ಟರೋ ನನಗೆ ಗೊತ್ತಿಲ್ಲ. ಇದು ತಮಾಷೆಯಾಗಿ ಮಾರ್ಪಟ್ಟಿದೆ. ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುವುದಾದರೆ, ಕಾಂಗ್ರೆಸ್ ಬಹುಶಃ ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತಿತ್ತು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ : ಸಭಾಧ್ಯಕ್ಷ ಯು.ಟಿ. ಖಾದರ್

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

SCROLL FOR NEXT