ನಯನಾ ಮೋಟಮ್ಮ 
ರಾಜಕೀಯ

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ಸೋ-ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ.

ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದು ನಯನಾ ಮೋಟಮ್ಮ ಹೇಳಿದರು.

ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು, ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು.

ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ.
ನಯನಾ ಮೋಟಮ್ಮ- ಕಾಂಗ್ರೆಸ್ ಶಾಸಕಿ

ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ. ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ ಎಂದರು. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್