ರಾಹುಲ್ ಗಾಂಧಿ 
ರಾಜಕೀಯ

ಚುನಾವಣಾ ಅಕ್ರಮ ವಿರೋಧಿಸಿ ಪಾದಯಾತ್ರೆ: ಪ್ರಧಾನ ಕಾರ್ಯದರ್ಶಿಗಳ ಸಭೆ ಬಳಿಕ ರಾಹುಲ್ ಕಾರ್ಯಕ್ರಮದ ಸ್ಥಳ, ಸ್ವರೂಪ ನಿಗದಿ; ಡಿ.ಕೆ ಶಿವಕುಮಾರ್

ಅವರ ಹೋರಾಟವನ್ನು ನಾನೇಕೆ ಟೀಕೆ ಮಾಡಲಿ? ಅವರ ವಿಚಾರ ಅವರು ಹೇಳಲಿ, ನಮ್ಮ ವಿಚಾರ ನಾವು ಹೇಳುತ್ತೇವೆ. ಮಾಧ್ಯಮಗಳಿರುವುದು ಎಲ್ಲರ ವಿಚಾರಗಳನ್ನು ಪ್ರಚಾರ ಮಾಡುವುದಕ್ಕೆ.

ಬೆಂಗಳೂರು: ಆಗಸ್ಟ್ 5ರಂದು ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಮುಖಂಡರ ಸಭೆ ಮಾಡಲಿದ್ದು, ಸಭೆ ಬಳಿಕ ಕಾರ್ಯಕ್ರಮದ ಸ್ವರೂಪ ಹಾಗೂ ಸ್ಥಳದ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಗುರುವಾರ ಶಾಸಕರು, ಎಂಎಲ್ ಸಿಗಳು, ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಈ ಸಭೆ ಬಳಿಕ ಸ್ಥಳ ತೀರ್ಮಾನಿಸಲಾಗುವುದು.

ನಾವು ಕೆಲವು ಸ್ಥಳಗಳ ಸಲಹೆ ನೀಡಿದ್ದು, ಪ್ರಧಾನ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಕ್ಷೇತ್ರದಿಂದ ಜನ ಬರಬೇಕು. ರಾಜ್ಯದ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು ಹಾಗೂ ನಾಯಕರು ಕಡ್ಡಾಯವಾಗಿ 5ರಂದು ಆಗಮಿಸಬೇಕು. ಈ ಸಂಬಂಧ ಆಗಸ್ಟ್ 3ರ ಒಳಗಾಗಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ಮಾಡಬೇಕು. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಭೆ ಮಾಡಬೇಕು” ಎಂದು ತಿಳಿಸಿದರು.

ನಾನು ನಿನ್ನೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಇಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನ್ಯಾಯಾಲಯದ ಕೆಲವು ಷರತ್ತುಗಳಿವೆ. ಅವುಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಹೀಗಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈ ವಿಚಾರವಾಗಿ ಈಗಲೇ ಹೆಚ್ಚಿನ ಮಾಹಿತಿ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಹೇಗೆ ಅಕ್ರಮ ನಡೆಸಲಾಗಿದೆ ಎಂಬ ಬಗ್ಗೆ ನಮ್ಮ ನಾಯಕರೇ ನಿಮಗೆ ಮಾಹಿತಿ ನೀಡಲಿದ್ದಾರೆ” ಎಂದರು.

ಬಿಜೆಪಿ ಕೂಡ ಹೋರಾಟ ಮಾಡುವುದಾಗಿ ತಿಳಿಸಿರುವ ಬಗ್ಗೆ ಕೇಳಿದಾಗ, “ಅವರು ಹೋರಾಟ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಹೋರಾಟ ಮಾಡಬೇಡ ಎಂದು ಹೇಳಲು ಸಾಧ್ಯವೇ? ಅವರ ಹೋರಾಟವನ್ನು ನಾನೇಕೆ ಟೀಕೆ ಮಾಡಲಿ? ಅವರ ವಿಚಾರ ಅವರು ಹೇಳಲಿ, ನಮ್ಮ ವಿಚಾರ ನಾವು ಹೇಳುತ್ತೇವೆ. ಮಾಧ್ಯಮಗಳಿರುವುದು ಎಲ್ಲರ ವಿಚಾರಗಳನ್ನು ಪ್ರಚಾರ ಮಾಡುವುದಕ್ಕೆ. ಆ ಕೆಲಸ ನೀವು ಮಾಡಿ” ಎಂದರು.

ಇದು ಬಿಹಾರ ಅಥವಾ ಕರ್ನಾಟಕದ ಪ್ರಶ್ನೆಯಲ್ಲ. ಮತಗಳ ದುರ್ಬಳಕೆ, ಅಕ್ರಮದ ವಿಚಾರ. ವಿಧಾನಸಭೆ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿ ನಾಗೇಶ್ ಅವರು ಅಕ್ರಮದ ಬಗ್ಗೆ ಧ್ವನಿ ಎತ್ತಿದ್ದರು. ಆದರೂ ನಾವು ಬಹುಮತ ಪಡೆದೆವು. ಲೋಕಸಭೆಯಲ್ಲಿ ಅಕ್ರಮ ನಡೆದಿದ್ದು ಕೆಲವು ಕ್ಷೇತ್ರಗಳಲ್ಲಿ ನಾವು ಪರಿಶೀಲನೆ ಮಾಡಿದ್ದೇವೆ. ಅವರು ಏನಾದರೂ ಟೀಕೆ ಮಾಡಿ ನಮ್ಮನ್ನು ನೆನೆಸಿಕೊಳ್ಳಲಿ” ಎಂದು ತಿಳಿಸಿದರು.

ಸರ್ಕಾರದಲ್ಲಿ ಹಣವಿಲ್ಲದ ಕಾರಣ ಕೇವಲ 15% ನಷ್ಟು ಟೆಂಡರ್ ಪೂರ್ಣಗೊಂಡಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು, ಬಿಜೆಪಿ ಅವಧಿಯಲ್ಲಿ ಸರ್ಕಾರದಲ್ಲಿ ಹಣವಿಲ್ಲದಿದ್ದರೂ ಟೆಂಡರ್ ಕರೆದಿದ್ದರು. ನಾವು ನಮ್ಮಲ್ಲಿರುವ ಹಣದ ಪ್ರಮಾಣಕ್ಕೆ ತಕ್ಕಂತೆ ಟೆಂಡರ್ ಕರೆಯುತ್ತಿದ್ದೇವೆ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ : ಸಭಾಧ್ಯಕ್ಷ ಯು.ಟಿ. ಖಾದರ್

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

SCROLL FOR NEXT