ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಚಾರದಿಂದ ಪ್ರಧಾನಿ ಮೋದಿ ಬದುಕಿದ್ದಾರೆ, 11 ವರ್ಷ ಪೂರೈಸಿದ ಕೇಂದ್ರ ಸರ್ಕಾರಕ್ಕೆ ಶೂನ್ಯ ಅಂಕ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರು ಪ್ರಚಾರದಿಂದಷ್ಟೇ ಬದುಕಿದ್ದಾರೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ ಎಂದರು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬದುಕಿರುವುದು ಪ್ರಚಾರದಿಂದ. 11 ವರ್ಷ ಪೂರೈಸಿದ ಅವರ ಸರ್ಕಾರಕ್ಕೆ ಶೂನ್ಯ ಅಂಕ ಕೊಡುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಪ್ರಚಾರದಿಂದಷ್ಟೇ ಬದುಕಿದ್ದಾರೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ ಎಂದರು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು, ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು, ಇವೆಲ್ಲಾ ಆಗಿದೆಯಾ? ಕೊನೆಗೆ ಕೇಂದ್ರ ಸರ್ಕಾರದ ವಿರುದ್ಧ ರೈತರೇ ಒಂದು ವರ್ಷ ಕಾಲ ಚಳುವಳಿಯನ್ನು ಮಾಡಿದರು ಎಂದು ಹೇಳಿದರು.

ಮೋದಿಯವರು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನೇ ಮಾಡಿಲ್ಲ. ತಮ್ಮ ಸರ್ಕಾರಕ್ಕೆ ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಅವರು ಪ್ರಚಾರ ನೀಡುತ್ತಿದ್ದಾರೆಂದು ತಿಳಿಸಿದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿ ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಜಾರಿ ಮಾಡಿದರು.

ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಅವರೇ ಪ್ರಧಾನಿಗಳಾದಾಗ ಏನು ಮಾಡಿದರು? ನಿರ್ಮಲಾ ಸೀತಾರಾಮನ್ ಅವರು ರೂ.5,300 ಕೋಟಿಗಳನ್ನು ರಾಜ್ಯಕ್ಕೆ ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15ನೇ ಹಣಕಾಸು ಆಯೋಗದವರು ಕರ್ನಾಟಕಕ್ಕೆ ರೂ.11,495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ರಾಜ್ಯ ಬಿಜೆಪಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಪ್ರಶ್ನೆ ಮಾಡುವುದನ್ನು ಬಿಟ್ಟು, ಅಪಪ್ರಚಾರ ಮಾಡುತ್ತಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT