ಸಂಗ್ರಹ ಚಿತ್ರ 
ರಾಜಕೀಯ

ದೆಹಲಿ ತಲುಪಿದ DCM ಡಿ.ಕೆ ಶಿವಕುಮಾರ್: ಹೈಕಮಾಂಡ್ ಭೇಟಿ, ಊಹಾಪೋಹ ಶುರು!

ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.

ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇಂದು ಬೆಳಗ್ಗೆ 11ಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್‌ ಸಭೆ ನಡೆಸಲಿದ್ದಾರೆ. ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು.

ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಸದ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್ 10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಹಣ ಸಾಗಿಸುತ್ತಿದ್ದ ಕಾರ್ಗೊ ವಿಮಾನ ಪತನ; 15 ಮಂದಿ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ನೋಟುಗಳು, ಮುಗಿಬಿದ್ದ ಜನರು: Video

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ರಂಜಾನ್ ಉಪವಾಸದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

SCROLL FOR NEXT