ಸಿಎಂ ಸಿದ್ದರಾಮಯ್ಯ 
ರಾಜಕೀಯ

ನೀವು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?; ಕಾರ್ಯಕ್ರಮಕ್ಕೆ ಆಹ್ವಾನ ನೀಡಿದವರು ನರಿಗಳು, ಬಂದವರು ಕುರಿಗಳಾ?

11 ಮುಗ್ಧ ಆರ್‌ಸಿಬಿ ಅಭಿಮಾನಿಗಳನ್ನು ಬಲಿ ಪಡೆದ ಮೇಲೂ ನಿಮ್ಮ ಸಮರ್ಥನೆ ಅಸಹ್ಯ ಹುಟ್ಟಿಸುತ್ತಿದೆ. ಕರುನಾಡಿನ ಜನರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ಮಹಾದುರಂತವನ್ನು ಎಂದಿಗೂ ಕ್ಷಮಿಸುವುದಿಲ್ಲ.

ಬೆಂಗಳೂರು: ವಿಧಾನಸೌಧದ ಮುಂದೆ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಸಬೂಬಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ‌ಕಿಡಿಕಾರಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? #ಮೆಟ್ಟಿಲುಮುಖ್ಯಮಂತ್ರಿ ಎಂದು ಕಿಚಾಯಿಸಿದ್ದಾರೆ.

ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನ ನೀಡಿದವರು ನರಿಗಳು, ಬಂದವರು ಕುರಿಗಳು ಎಂಬಂತಿದೆ ನಿಮ್ಮ ಲಜ್ಜೆಗೆಟ್ಟ ಸಮರ್ಥನೆ. ಈ ಐತಿಹಾಸಿಕ ಸಂಭ್ರಮದಲ್ಲಿ ನೀವು ಭಾಗಿಯಾಗಿ ಎಂದು ಸಿದ್ದರಾಮಯ್ಯ ಆಹ್ವಾನಿಸಿದರು.

ಸಂಜೆ 4 ಗಂಟೆಗೆ ಸ್ಡೇಡಿಯಂ,,, ಸ್ಟೇಡಿಯಂಗೆ ಬನ್ನಿ" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಮೂಲಕ ಆಹ್ವಾನ ನೀಡಿದರು. ರಾಜ್ಯ ಸರ್ಕಾರ ಯಾವುದೇ ಒಂದು ಕಾರ್ಯಕ್ರಮ ಆಯೋಜಿಸಬೇಕಾದರೆ ಗುಪ್ತಚರ ಇಲಾಖೆ ಮಾಹಿತಿ ಅನುಸರಿಸಿ ಅಗತ್ಯ ಪೂರ್ವಸಿದ್ಧತೆ, ಪೊಲೀಸ್‌ ಭದ್ರತೆ, ಜನಸಂದಣಿ ನಿರ್ವಹಣೆ ಮಾಡಬೇಕು ಎಂಬ ಕನಿಷ್ಠ ಜ್ಞಾನ ಇಲ್ಲವಾಯ್ತೇ ? ಎಂದು ಜೆಡಿಎಸ್ ಪ್ರಶ್ನಿಸಿದೆ. 11 ಮುಗ್ಧ ಆರ್‌ಸಿಬಿ ಅಭಿಮಾನಿಗಳನ್ನು ಬಲಿ ಪಡೆದ ಮೇಲೂ ನಿಮ್ಮ ಸಮರ್ಥನೆ ಅಸಹ್ಯ ಹುಟ್ಟಿಸುತ್ತಿದೆ. ಕರುನಾಡಿನ ಜನರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ಮಹಾದುರಂತವನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್