ಎಚ್ ವಿಶ್ವನಾಥ್ 
ರಾಜಕೀಯ

ನವೆಂಬರ್‌ ನಂತರ ಡಿಕೆಶಿ ಅಥವಾ ಖರ್ಗೆ​ ಸಿಎಂ: ಎಚ್‌ ವಿಶ್ವನಾಥ್‌

ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಆದರೆ ಮುಂದಿನ ನವೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಶ್ವನಾಥ್ ಅವರು, ಸಿಎಂ ಸಿದ್ದರಾಮಯ್ಯ ಅವರು ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಆದರೆ ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಆದರೆ ಮುಂದಿನ ನವೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವೋಟು ಪಡೆದು ಎರಡನೇ ಸಲ ಮುಖ್ಯಮಂತ್ರಿಯಾದವರು. ಅಹಿಂದ ವರ್ಗದವರಿಗೆ ಸುಳ್ಳು ಹೇಳುತ್ತಿದ್ದಾರೆ, ಜಾತಿ ಗಣತಿ ಮರುಸರ್ವೇಯನ್ನು ಅವರು ಮೂರು ತಿಂಗಳಲ್ಲಿ ಮಾಡಿಸೋದು ಹೇಗೆ ಸಾಧ್ಯ? ಮರು ಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಆದರೆ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT