ನೂತನ ಜಿಲ್ಲಾಧ್ಯಕ್ಷರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. 
ರಾಜಕೀಯ

2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ BJP ಮುಂದು; ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು. ಇದೇ ವೇಳೆ ಎಲ್ಲ ಜಿಲ್ಲಾಧ್ಯಕ್ಷರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

ಬೆಂಗಳೂರು: 2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ.

ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು. ಇದೇ ವೇಳೆ ಎಲ್ಲ ಜಿಲ್ಲಾಧ್ಯಕ್ಷರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

ಬಳಿಕ ಮಾತನಾಡಿರುವ ಅವರು, ನೂತನ ಅಧ್ಯಕ್ಷರು ತಮ್ಮ ಜಿಲ್ಲೆಗಳ ವ್ಯಾಪ್ತಿಯ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮಳೆಗಾಲದ ಸಂಕಷ್ಟಗಳು, ರೈತರ ಸಮಸ್ಯೆಗಳು, ಕೋಮು ಘರ್ಷಣೆಗಳು ಮುಂತಾದ ಸ್ಥಳೀಯ ಸಮಸ್ಯೆಗಳ ಕುರಿತು ಧ್ವನಿ ಎತ್ತಬೇಕು. ಹೋರಾಟಗಳಲ್ಲಿ ಜನರೂ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯ ನಾಯಕರು ಧ್ವನಿ ಎತ್ತಲು ರಾಜ್ಯ ಹಾಗೂ ರಾಷ್ಟ್ರೀಯದ ಹಲವು ವಿಚಾರಗಳಿವೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದ ಹಲವು ಸಮಸ್ಯೆಗಳೂ ಇವೆ. ಜಿಲ್ಲಾಧ್ಯಕ್ಷರು ಮತ್ತು ಶಾಸಕರು ಈ ಕುರಿತು ಧ್ವನಿ ಎತ್ತಬೇಕು. ಈ ಮೂಲಕ ಜನರನ್ನು ತಲುಪಬೇಕು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಮೂಲಕ ಅಧಿಕಾರಕ್ಕೆ ಬರಲು ಬಯಸುತ್ತಿದೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷ ಮಾತ್ರವಲ್ಲ, ಪ್ರಧಾನಿ ಮೋದಿಯವರ ರಾಯಭಾರಿಗಳೂ ಕೂಡ ಆಗಿದ್ದೇವೆಂದು ನಾವು ಜಿಲ್ಲಾಧ್ಯಕ್ಷರಿಗೆ ಹೇಳಿದ್ದೇವೆ. ಪಕ್ಷವನ್ನು ಬಲಪಡಿಸುವ ಮತ್ತು ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವತ್ತ ನಾವು ಕೆಲಸ ಮಾಡಬೇಕಾಗಿದೆ ಎಂದು ತಿಳಿಸಲಾಗಿದೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.

ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಅಧ್ಯಕ್ಷರಿಗೆ ನಿರ್ದೇಶನ ನೀಡಲಾಗಿದೆ. ಸುಮ್ಮನೆ ಕುಳಿತುಕೊಳ್ಳದೆ, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ತಿಳಿಸಲಾಗಿದೆ. ಬಿಬಿಎಂಪಿ/ಜಿಬಿಎ ಚುನಾವಣೆಗಳ ಜೊತೆಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ಹತ್ತಿರ ಬರುತ್ತಿದ್ದು, ಪಕ್ಷವನ್ನು ಬಲಪಡಿಸಲು ಮತ್ತು ಮತ್ತೆ ಅಧಿಕಾರಕ್ಕೆ ಬರಲು ಈ ಚುನಾವಣೆಗಳಲ್ಲಿ ಗೆಲ್ಲುವ ಅವಶ್ಯಕತೆಯಿದೆ ಎಂದೂ ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಜುಲೈನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಪಕ್ಷದ ನಾಯಕರು ಜಿಲ್ಲಾ ಮಟ್ಟದಲ್ಲಿ ಸದನದ ಒಳಗೆ ಮತ್ತು ಹೊರಗೆ ಸಮಸ್ಯೆಗಳ ಹಿಡಿದು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿರೀಕ್ಷೆಯಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT