ಜಗದೀಶ್ ಶೆಟ್ಟರ್ 
ರಾಜಕೀಯ

ಬೆಳಗಾವಿ: ಅನೇಕ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಜ್ಜಾಗಿದ್ದಾರೆ- ಜಗದೀಶ್ ಶೆಟ್ಟರ್

ಸಿಎಂ ಬದಲಾವಣೆ ಆಗ್ತಾರೆ ಎಂಬುದು ಗೊತ್ತಿಲ್ಲ. ಆದರೆ ಸರ್ಕಾರ ಮಾತ್ರ ಬಹಳ ದಿನ ಇರಲ್ಲ.

ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆಳುತ್ತಿರುವಂತೆಯೇ ರಾಜು ಕಾಗೆ ಸೇರಿದಂತೆ ಹಲವು ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಆಂತರಿಕ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರ್ಕಾರ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ ಎಂದರು.

ಸಿಎಂ ಬದಲಾವಣೆ ಆಗ್ತಾರೆ ಎಂಬುದು ಗೊತ್ತಿಲ್ಲ. ಆದರೆ ಸರ್ಕಾರ ಮಾತ್ರ ಬಹಳ ದಿನ ಇರಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ಆದರೆ ಹತಾಶ ಕಾಂಗ್ರೆಸ್ ಶಾಸಕರು ತಾವಾಗಿಯೇ ಬಿಜೆಪಿ ಸೇರಲಿದ್ದಾರೆ. ನಾವು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ‌. ಅವರೇ ಬರ್ತಾರೆ ಇದಕ್ಕೆ ಆಪರೇಷನ್ ಕಮಲ ಅಂತಾರೆ ಎಂದು ಹೇಳಿದರು.

ಹಿರಿಯ ಶಾಸಕರು ಬಹಿರಂಗವಾಗಿಯೇ ಸಿಡಿದೇಳುವುದರೊಂದಿಗೆ ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸರ್ಕಾರದಲ್ಲಿ ಯಾವುದೇ ಕೆಲಸ ಆಗ್ತಿಲ್ಲ. ಸರ್ಕಾರ ದೀವಾಳಿ ಆಗಿದೆ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾವ ಕೆಲಸ ಆಗ್ತಿಲ್ಲ ಅಂತಾ ಆಡಳಿತ ಪಕ್ಷದವರು ಹೇಳ್ತಿದ್ದಾರೆ‌ ಎಂದರು.

ಮೂಗಿಗೆ ತುಪ್ಪು ಒರೆಸುವ ಕೆಲಸ ಸಿದ್ದರಾಮಯ್ಯ ಮಾಡ್ತಿದ್ದಾರೆ. ಟೆಂಡರ್ ಮಾಡೋದು ವರ್ಕ್ ಆರ್ಡರ್ ಕೊಡುವುದಿಲ್ಲ. ರಾಜು ಕಾಗೆ, ಬಿಆರ್ ಪಾಟೀಲ್ ಹೇಳಿಕೆ ಸರಿ ಇದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT