ಕೆಎನ್ ರಾಜಣ್ಣ ಮತ್ತು ಸಿದ್ದರಾಮಯ್ಯ (ಸಂಗ್ರಹ ಚಿತ್ರ)  
ರಾಜಕೀಯ

ಪಕ್ಷದಲ್ಲಿ ಆಂತರಿಕ ಕಲಹವಿಲ್ಲ, ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ: ಸಿಎಂ ಸಿದ್ದರಾಮಯ್ಯ

ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹವಿಲ್ಲ. ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸರ್ಕಾರದಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿವೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನನಗೆ ಈ ವಿಚಾರ ಗೊತ್ತಿಲ್ಲ. ನೀವು ಅವರನ್ನೇ ಕೇಳಿ. ನಾವು ಅವರ ಜೊತೆ ಚರ್ಚೆ ಮಾಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

ಇನ್ನೂ ಕೆಎನ್ ರಾಜಣ್ಣ ವಿಷಯವಾಗಿ ಮಾತನಾಡಿದ ಮಾಜಿ ಸಂಸದ ಡಿ.ಕೆ ಸುರೇಶ್ “ರಾಜಣ್ಣ ಅವರು ಸರ್ಕಾರದ ಒಂದು ಭಾಗ. ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಅವರನ್ನೇ ಕೇಳಬೇಕೇ ಹೊರತು ಬೇರೆಯವರನ್ನಲ್ಲ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT