ವಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ದಸರಾಗೂ ಮುನ್ನ ರಾಜ್ಯದ ಆಡಳಿತ ಬದಲಾವಣೆ: ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ

ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉತ್ಸವ ನಡೆಯುವುದಿಲ್ಲ. ದಸರಾಗೂ ಮುನ್ನ ಹೊಸ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಹೇಳಿದ್ದೇನೆ.

ಮೈಸೂರು: ಈ ವರ್ಷದ ದಸರಾ ಉತ್ಸವಕ್ಕೂ ಮುನ್ನ ರಾಜ್ಯದ ಆಡಳಿತದಲ್ಲಿ ಬದಲಾವಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉತ್ಸವ ನಡೆಯುವುದಿಲ್ಲ. ದಸರಾಗೂ ಮುನ್ನ ಹೊಸ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಹೇಳಿದ್ದೇನೆಂದು ಹೇಳಿದರು.

ಬದಲಾವಣೆ ಅನಿವಾರ್ಯ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಈಗಾಗಲೇ ಆಂತರಿಕ ಹಗ್ಗಜಗ್ಗಾಟ ನಡೆಯುತ್ತಿದೆ. ನೀವೀಗ ನೋಡುತ್ತಿರುವುದು ಕೇವಲ ಟ್ರೇಲರ್ ಮಾತ್ರ, ಪೂರ್ಣ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಮುಖ್ಯಮಂತ್ರಿ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಸಹ ಇದನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕೀಯದಲ್ಲಿ ತೊಡಗಿದ್ದು, ಕಾಂಗ್ರೆಸ್‌ನಲ್ಲಿ ಅಧಿಕಾರ ಹೋರಾಟವು ಉತ್ತುಂಗಕ್ಕೇರಿದೆ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆ ಕುರಿತ ಊಹಾಪೋಹಗಳನ್ನು ತಳ್ಳಿಹಾಕಿದ ಅವರು, ರಾಜ್ಯ ಅಧ್ಯಕ್ಷರನ್ನು ಅಥವಾ ವಿರೋಧ ಪಕ್ಷದ ನಾಯಕರನ್ನು ಬದಲಾಯಿಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲು ನಾನು ಪ್ರತಿ ಮೂರು ತಿಂಗಳಿಗೊಮ್ಮೆ ದೆಹಲಿಗೆ ಭೇಟಿ ನೀಡಬೇಕಾಗುತ್ತದೆ. ಇದರಂತೆ ನಿನ್ನೆ ದೆಹಲಿಗೆ ಹೋಗಿ ವರದಿ ನೀಡಿದ್ದೆ. ಪ್ರಸ್ತುತ ರಾಜ್ಯಾಧ್ಯಕ್ಷರಿಗಾಗಿ ಯಾವುದೇ ಚುನಾವಣೆಗಳೂ ನಡೆಯುವುದಿಲ್ಲ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಕುರಿತು ಪ್ರತಿಕ್ರಿಯಿಸಿ, ಸಭೆ ನನ್ನ ಮನೆಯಲ್ಲಿ ನಡೆಯಬೇಕಿತ್ತು, ಆದರೆ, ನಾನು ಹೊರಗಿದ್ದರಿಂದ, ಅಲ್ಲಿ ನಡೆಸಲಾಗಿದೆ. ಯಾವುದೇ ಗೊಂದಲವನ್ನು ಬಗೆಹರಿಸಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಹಿರಿಯ ನಾಯಕರ ಸಭೆಗಳನ್ನು ನಡೆಸುವಂತೆ ಪಕ್ಷವು ನಮಗೆ ಸೂಚನೆ ನೀಡಿದೆ. ಸಭೆ ನಡೆಸಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT