ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ಬಂಡೆಯ ರೀತಿ ನಮ್ಮ ಸರ್ಕಾರ 5 ವರ್ಷ ಸುಭದ್ರ: ಕೈ-ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ

ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ.

ಮೈಸೂರು: ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆ ಶಿವಕುಮಾರ್ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಉಪ‌ ಮುಖ್ಯಮಂತ್ರಿ‌ ಡಿ.ಕೆ. ಶಿವಕುಮಾರ್ ಜೊತೆ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಅವರು ' ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ' ಎಂದರು.

'ರಣದೀಪಸಿಂಗ್ ಸುರ್ಜೇವಾಲ ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಅವರು ನಮ್ಮ ಪಕ್ಷದ ಶಾಸಕರ ಕಷ್ಟ-ಸುಖ ಕೇಳುತ್ತಾರೆ. ಅದರಲ್ಲಿ ವಿಶೇಷವೇನಿಲ್ಲ' ಎಂದರು. ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.

ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ ಹೃದಾಯಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ ಅದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಾಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ಅದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಖುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT