ರಣದೀಪ್ ಸಿಂಗ್ ಸುರ್ಜೇವಾಲಾ 
ರಾಜಕೀಯ

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ; ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಅದೆಲ್ಲವೂ ನಿಮ್ಮ ಕಲ್ಪನೆ ಮಾತ್ರ ಎಂದರು.

ಬೆಂಗಳೂರು: ಆಡಳಿತ ಪಕ್ಷದೊಳಗಿನ "ಅತೃಪ್ತಿ" ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಬೆಂಗಳೂರಿನಲ್ಲಿ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದರು.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಅದೆಲ್ಲವೂ ನಿಮ್ಮ ಕಲ್ಪನೆ ಮಾತ್ರ ಎಂದರು.

ಪಕ್ಷದ ಶಾಸಕರ ಭೇಟಿ ನಿರಂತರ ಪ್ರಕ್ರಿಯೆ. ಇದು ಒಂದು ತಿಂಗಳು ಅಥವಾ ಒಂದೂವರೆ ತಿಂಗಳು ನಡೆಯಲಿದೆ. ಈ ಸಮಯದಲ್ಲಿ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖ್ಯಸ್ಥರನ್ನು ಭೇಟಿ ಮಾಡುತ್ತೇನೆ. ಬಳಿಕ ಸಿಎಂ ಹಾಗೂ ಡಿಸಿಎಂ ಜೊತೆಗೂ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವುದರಿಂದ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಕಾಂಗ್ರೆಸ್ ಸಂಘಟನೆ ಅವರವರ ಕ್ಷೇತ್ರದಲ್ಲಿ ಹೇಗಿದೆ ಎಂಬ ವರದಿ ಪಡೆಯುತ್ತಿದ್ದೇವೆ. ಮುಂಚೂಣಿ ಘಟಕಗಳು ಹೇಗೆ ಕೆಲಸ ಮಾಡುತ್ತಿವೆ ಎಂಬ ರಿವ್ಯೂ ಮಾಡುತ್ತಿದ್ದೇವೆ. ಎಷ್ಟು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ ಅನ್ನೋದರ ಬಗ್ಗೆ ಮಾಹಿತಿ ಪಡೆಯುತ್ತೇವೆ.‌ ಸಿಎಂ ಹಾಗೂ ಸಚಿವರಿಗೆ ಇದರಿಂದ ಮಾಹಿತಿ ನೀಡಲು ಹಾಗೂ ಅರ್ಥ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಇದು ಸಂಘಟನಾತ್ಮಕ ಚಟುವಟಿಕೆಯಾಗಿದ್ದು, ಎಐಸಿಸಿ ಕೆಪಿಸಿಸಿ ಜಂಟಿಯಾಗಿ ಮಾಡಬೇಕಿದೆ. ಎಂಎಲ್ಎಗಳು ಪಕ್ಷ ಸಂಘಟನೆಗೆ ಕೆಲಸ ಮಾಡುತ್ತಿದ್ದಾರೆ. ಒಂದೇ ಒಂದು ರಾಜ್ಯ ಇಡೀ ದೇಶದಲ್ಲಿ 52 ಸಾವಿರ ಕೋಟಿ ನೇರವಾಗಿ ಜನರ ಖಾತೆಗೆ ಹಾಕುತ್ತಿದೆ. ಗೃಹ ಲಕ್ಷ್ಮಿಯರ ಖಾತೆಗೆ ವಾರ್ಷಿಕ 24 ಸಾವಿರ ಹಣವನ್ನು ಖಾತೆಗೆ ಹಾಕುತ್ತಿದ್ದೇವೆ. ಮೋದಿ ಹಾಗೂ ಬಿಜೆಪಿ ಸೃಷ್ಟಿ ಮಾಡಿದ ಹಣದುಬ್ಬರಕ್ಕೆ ಪರಿಹಾರ ನಾವು ಒದಗಿಸಿದ್ದೇವೆ. 4 ಕೋಟಿ ಜನರಿಗೆ ಅಕ್ಕಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಈ ಮಧ್ಯೆ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಅವರು ಶಾಸಕರ ಅಭಿಪ್ರಾಯವನ್ನು ಪಡೆಯುತ್ತಾರೆ. ಅವರ ಕಳವಳಗಳನ್ನು ಕೇಳುತ್ತಾರೆ ಮತ್ತು ಸಂಘಟನೆಯನ್ನು ಬಲಪಡಿಸಲು ಏನು ಮಾಡಬೇಕೆಂದು ನಿರ್ಣಯಿಸುತ್ತಾರೆ. ಅವರು ತಮ್ಮ ಕೆಲಸವನ್ನು ಮಾಡುತ್ತಾರೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT