ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮುಂದು; 42 ಮಂದಿ ಶಾಸಕರೊಂದಿಗೆ ಸುರ್ಜೇವಾಲಾ ಮುಖಾಮುಖಿ ಚರ್ಚೆ

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 45 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಹವಾಲು ಆಲಿಸಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಚಿವರು, ಅಧಿಕಾರಿಗಳ ಧೋರಣೆ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಹವಾಲು ಆಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 45 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಹವಾಲು ಆಲಿಸಲಿದ್ದಾರೆಂದು ತಿಳಿದುಬಂದಿದೆ.

ಶಾಸಕರಾದ ಬಿ.ಆರ್. ಪಾಟೀಲ್ ಹಾಗೂ ರಾಜು ಕಾಗೆ ಅವರು ಆಡಳಿತ ವೈಫಲ್ಯದ ಬಗ್ಗೆ ಮಾಡಿರುವ ಬಹಿರಂಗ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಜೊತೆಗೆ ಹಲವು ಶಾಸಕರು ಅನುದಾನ ಕೊರತೆ, ಸಚಿವರ ಅಸಹಕಾರ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಿ ಜೂ.30ರಿಂದ ಜು.2ರವರೆಗೆ 3 ದಿನಗಳ ಕಾಲ ಬೆಂಗಳೂರು ವಿಭಾಗದ 27 ಮಂದಿ, ಮೈಸೂರು ವಿಭಾಗದ 13 ಶಾಸಕರೊಂದಿಗೆ ಮೊದಲ ಹಂತದಲ್ಲಿ 'ಒನ್ ಟು ಒನ್' ಸಭೆ ನಡೆಸಲಿದ್ದಾರೆ.

ಇದಕ್ಕೂ ಮೊದಲು ಆಡಳಿತ ವೈಫಲ್ಯದ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಶಾಸಕ ರಾಜು ಕಾಗೆ ಹಾಗೂ ಬಿ.ಆರ್. ಪಾಟೀಲ್ ಜತೆ ಪ್ರತ್ಯೇಕವಾಗಿ ತಲಾ ಅರ್ಧಗಂಟೆ ಚರ್ಚೆ ನಡೆಸಿ ಮನವೊಲಿಕೆ ಯತ್ನ ಮಾಡಲಿದ್ದಾರೆ ಎನ್ನಲಾಗಿದೆ.

ಸುರ್ಜೇವಾಲಾ ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಸುರ್ಜೇವಾಲಾ ಅವರು ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸುರ್ಜೇವಾಲ ಈಗಾಗಲೇ ಶಾಸಕರಿಗೆ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ಕೂಡ ಶಾಸಕರಿಗೂ ಸಂದೇಶಗಳನ್ನು ರವಾನಿಸುತ್ತೇನೆಂದು ತಿಳಿಸಿದರು.

ಇದೇ ವೇಳೆ ಕಾವೇರಿ ಆರತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪೂಜೆಗೆ ಯಾರೂ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಹೈಕೋರ್ಟ್ ಹೊರಡಿಸಿರುವ ನೋಟಿಸ್‌ಗೆ ರಾಜ್ಯ ಸರ್ಕಾರ ಉತ್ತರಿಸಲಿದೆ ಎಂದರು.

ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಬಳಿ ಕಾವೇರಿ ಆರತಿ ನಡೆಸುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಮೇರೆಗೆ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕೆಲವು ಸಂಘಟನೆಗಳು ಕೆಲವು ಕಳವಳಗಳನ್ನು ಹೊಂದಿವೆ. ಸರ್ಕಾರ ಅವುಗಳನ್ನು ಪರಿಹರಿಸುತ್ತದೆ. ಪೂಜೆ ಪ್ರತಿದಿನವೂ ನಡೆಯುತ್ತಿದೆ ಎಂದರು.

ಆಗಸ್ಟ್‌ನಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, "ಅಶೋಕ ಯಾವಾಗ ಜ್ಯೋತಿಷಿಯಾದರು? ಅವರು ಜ್ಯೋತಿಷಿಯಾಗಿದ್ದರೆ, ನನಗೆ ಅಪಾಯಿಂಟ್‌ಮೆಂಟ್ ಕೊಡಿ, ಏಕೆಂದರೆ ನಾನು ಅವರನ್ನು ಸಂಪರ್ಕಿಸಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT