ಶ್ರೀರಾಮುಲು 
ರಾಜಕೀಯ

ರಾಜ್ಯದಲ್ಲಿ ಏಕನಾಥ ಶಿಂಧೆ ಎಪಿಸೋಡ್ ಮರುಕಳಿಸಿದರೆ ಆಶ್ಚರ್ಯಪಡಬೇಕಿಲ್ಲ: ಬಿ ಶ್ರೀರಾಮುಲು

ವಿರೇಂದ್ರ ಪಾಟೀಲ, ಡಿ.ದೇವರಾಜ ಅರಸು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದನ್ನು ನೋಡಿದ್ದೇವೆ.

ಮೈಸೂರು: ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂದೆ ಯಾರೆಂಬುದು ಸದ್ಯದಲ್ಲೇ ಗೊತ್ತಾಗಲಿದೆ, ರಾಜ್ಯದಲ್ಲಿ ಏಕನಾಥ ಶಿಂಧೆ ಎಪಿಸೋಡ್ ಮರುಕಳಿಸಿದರೆ ಆಶ್ಚರ್ಯಪಡಬೇಕಿಲ್ಲ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಡಿ.ದೇವರಾಜ ಅರಸು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದನ್ನು ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಕಂಡ ಕ್ಷಿಪ್ರ ರಾಜಕಾರಣವನ್ನೂ ರಾಜ್ಯದಲ್ಲೂ ನೋಡಲಿದ್ದೇವೆ’ ರಾಜ್ಯ ರಾಜಕೀಯದಲ್ಲಿಯೂ ಇಂತಹ ಬೆಳವಣಿಗೆಗಳು ಮತ್ತೆ ಪುನರಾವರ್ತನೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.

ಒಂದು ವೇಳೆ ಅಂತಹ ಬೆಳವಣಿಗೆಗಳು ನಡೆದರೇ, ಅಂತಹ ನಾಯಕನನ್ನು ಬೆಂಬಲಿಸಬೇಕೆ ಎಂದು ನಿರ್ಧರಿಸುವುದು ಬಿಜೆಪಿ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಹೇಳಿದರು. ಜಾತಿ ಜನಗಣತಿ ವರದಿಯ ಬಗ್ಗೆ ಕೇಳಿದಾಗ, ಅನೇಕರು ಇದರಿಂದ ಅಸಮಾಧಾನಗೊಂಡಿದ್ದಾರೆ ಮತ್ತು ಇದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಶ್ರೀರಾಮುಲು ಹೇಳಿದರು.

ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗುಂಪುಗಾರಿಕೆ ಇಲ್ಲ ಎಂದರು. ಬೆಂಗಳೂರಿನಲ್ಲಿ ಸಭೆ ನಡೆಸುವ ಬಂಡಾಯ ನಾಯಕರ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಹೈಕಮಾಂಡ್ ಎಲ್ಲಾ ಭಿನ್ನಾಭಿಪ್ರಾಯಗಳನ್ನು ನಿವಾರಿಸುತ್ತದೆ ಮತ್ತು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ನಡೆಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT