ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ.ಶಿವಕುಮಾರ್ ಹಾಗೂ ಅಮಿತ್ ಶಾ. online desk
ರಾಜಕೀಯ

ಸದ್ಗುರು ಜೊತೆ ವೇದಿಕೆ ಹಂಚಿಕೊಂಡ ಡಿಕೆಶಿ: ರಾಹುಲ್ ಅವಮಾನಿಸಿದವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಎಷ್ಟು ಸರಿ?- ಸಚಿವ ರಾಜಣ್ಣ

ನಮ್ಮ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನು ಸದ್ಗುರುಗಳು ಅವಮಾನಿಸಿದ್ದಾರೆಂದು ಡಿಕೆ.ಶಿವಕುಮಾರ್ ಅವರಿಗೆ ತಿಳಿದಿಲ್ಲವೇ?

ಬೆಂಗಳೂರು: ಸದ್ಗುರು ಜಗದೀಶ್ ವಾಸುದೇವ್ ಅವರ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರ ಕುರಿತು ಸಚಿವ ರಾಜಣ್ಣ ಅವರು ತೀವ್ರವಾಗಿ ಕಿಡಿಕಾರಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಯಾರೆಂದು ನನಗೆ ತಿಳಿದಿಲ್ಲ ಎಂದು ಒಮ್ಮೆ ಸದ್ಗುರು ಹೇಳಿದ್ದರು. ಅವರೊಂದಿಗೆ ಡಿಕೆ.ಶಿವಕುಮಾರ್ ಹೇಗೆ ವೇದಿಕೆ ಹಂಚಿಕೊಂಡರು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಹೇಳಿದರು.

ನಮ್ಮ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನು ಸದ್ಗುರುಗಳು ಅವಮಾನಿಸಿದ್ದಾರೆಂದು ಡಿಕೆ.ಶಿವಕುಮಾರ್ ಅವರಿಗೆ ತಿಳಿದಿಲ್ಲವೇ? ರಾಜಕಾರಣದಲ್ಲಿ ಯಾರ್ಯಾರು, ಏನೇನು ಮಾತನಾಡುತ್ತಾರೆ ಎಂಬುದು ನನಗಿಂತಲೂ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ ಎಂದು ತಿಳಿಸಿದರು.

ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಈ ವಿಷಯ ಪಕ್ಷದ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದರು.

ಎಂ.ಬಿ. ಪಾಟೀಲ್ ಅವರು ಮಾತನಾಡಿ, ಶಿವಕುಮಾರ್ ಹಿಂದೂ ಧರ್ಮವನ್ನು ಅನುಸರಿಸುವವರು. ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗುವುದರಲ್ಲಿ ತಪ್ಪೇನಿದೆ? ಎಂದು ವಾದಿಸಿದರು,

ಹಿಂದುತ್ವ ಬಿಜೆಪಿಯ ಆಸ್ತಿಯಲ್ಲ. ಶಿವಕುಮಾರ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸಲು ಶ್ರಮಿಸುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT