ವೀರಪ್ಪ ಮೊಯ್ಲಿ-ಡಿಕೆ ಶಿವಕುಮಾರ್ 
ರಾಜಕೀಯ

ಡಿಕೆ ಶಿವಕುಮಾರ್ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ರಾಜ್ಯದಲ್ಲಿ ಸಿಎಂ ಹುದ್ದೆ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರೇ ಡಿಕೆ ಶಿವಕುಮಾರ್ ಸಿಎಂ ಹಾಗೇ ಆಗುತ್ತಾರೆ ಎಂದು ಹೇಳುತ್ತಿದ್ದಾರೆ.

ಉಡುಪಿ: ರಾಜ್ಯದಲ್ಲಿ ಸಿಎಂ ಹುದ್ದೆ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರೇ ಡಿಕೆ ಶಿವಕುಮಾರ್ ಸಿಎಂ ಹಾಗೇ ಆಗುತ್ತಾರೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿ ಅವರು ಡಿಸಿಎಂ ಡಿಕೆಶಿ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಮೊದಲು ಡಿಕೆ ಶಿವಕುಮಾರ್ ಗೆ MLA ಟಿಕೆಟ್ ಕೊಡಿಸಿದ್ದು ನಾನೇ. ಈಗ ಅವರು ಪಕ್ಷದಲ್ಲಿ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ ಎಂದರು. ವಿನಃ ಕಾರಣ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬೇಡಿ. ನಿಮ್ಮ ವಿರುದ್ಧ ಹೇಳಿಕೆಗಳು ಬರುತ್ತೆ ಹೋಗುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಸಿಎಂ ಹುದ್ದೆ ಯಾರೂ ಕೊಡುವ ವರ ಅಲ್ಲ. ಅದು ಡಿ.ಕೆ ಶಿವಕುಮಾರ್​​​ ಸಂಪಾದನೆ ಮಾಡಿರುವ ಶಕ್ತಿ. ಈ ಪುಣ್ಯ ಭೂವಿಯಲ್ಲಿ ಆಡಿದ ಮಾತು ನೂರಕ್ಕೆ ನೂರು ಸತ್ಯ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆಶಿಗೆ ಸಿಎಂ ಹುದ್ದೆ ತಪ್ಪಿಸಲು ಆಗುವುದಿಲ್ಲ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!