ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ 
ರಾಜಕೀಯ

ಬಿಜೆಪಿ ನಾಯಕರು ಮುಸ್ಲಿಮರ ವಿರುದ್ಧ ಮಾತನಾಡುವ ಮೂಲಕ ರಾಜಕೀಯದಲ್ಲಿ ಬದುಕುಳಿದಿದ್ದಾರೆ: ಲಕ್ಷ್ಮಣ್

ರಾಜ್ಯದ ಏಳು ಕೋಟಿ ಜನಸಂಖ್ಯೆಯಲ್ಲಿ, ಶೇ. 14 ರಷ್ಟು ಜನರು ಮುಸ್ಲಿಮರು, ಕ್ರಿಶ್ಚಿಯನ್ನರು, ಜೈನರು, ಸಿಖ್ಖರು, ಬೌದ್ಧಗಳಿದ್ದಾರೆ. ಜನಸಂಖ್ಯೆಯ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಬೇಕು.

ಮೈಸೂರು: ಮುಸ್ಲಿಮರ ವಿರುದ್ಧ ಮಾತನಾಡುವ ಮೂಲಕ ರಾಜಕೀಯದಲ್ಲಿ ಬದುಕುಳಿದಿದ್ದಾರೆ. ಅವರ ಬಗ್ಗೆ ಮಾತನಾಡದೆ ಹೋದರೆ ಅವರಿದೆ ದೇಹದಲ್ಲಿ ರಕ್ತವೇ ಹರಿಯುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಏಳು ಕೋಟಿ ಜನಸಂಖ್ಯೆಯಲ್ಲಿ, ಶೇ. 14 ರಷ್ಟು ಜನರು ಮುಸ್ಲಿಮರು, ಕ್ರಿಶ್ಚಿಯನ್ನರು, ಜೈನರು, ಸಿಖ್ಖರು, ಬೌದ್ಧಗಳಿದ್ದಾರೆ. ಜನಸಂಖ್ಯೆಯ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಬೇಕು. ಆದ್ದರಿಂದ ಮಾರ್ಗಸೂಚಿಗಳ ಪ್ರಕಾರ, ಶೇ. 14 ರಷ್ಟು ಅಲ್ಪಸಂಖ್ಯಾತ ಜನಸಂಖ್ಯೆಗೆ ಸರ್ಕಾರ ರೂ.65,000 ಕೋಟಿ ಹಂಚಿಕೆ ಮಾಡಬೇಕು. ಆದರೆ ಸರ್ಕಾರ ಅಲ್ಪಸಂಖ್ಯಾತರಿಗೆ ಕೇವಲ 4,300 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ, ಇದು ಒಟ್ಟು ಬಜೆಟ್ ಗಾತ್ರದ 4.09 ಲಕ್ಷ ಕೋಟಿ ರೂಪಾಯಿಗಳಲ್ಲಿ ಕೇವಲ ಶೇ.1 ಮಾತ್ರ ಆಗಿದೆ. ಉಳಿದ ಶೇ.99 ರಷ್ಟು ಹಣವನ್ನು ಹಿಂದೂಗಳಿಗೆ ಮೀಸಲಿಡಲಾಗಿದೆ ಎಂದು ಹೇಳಿದರು.

ಬಿಜೆಪಿ ನಾಯಕರಿಗೆ ಬಜೆಟ್ ಹಂಚಿಕೆಗಳ ಬಗ್ಗೆ ಯಾವುದೇ ಜ್ಞಾನವಿಲ್ಲ. ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲ. ಆರ್. ಅಶೋಕ, ಛಲವಾದಿ ನಾರಾಯಣ ಮತ್ತು ಸಿ.ಟಿ. ರವಿ ಅವರಂತಹ ಬಿಜೆಪಿ ನಾಯಕರು ಮುಸ್ಲಿಮರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ವಿರುದ್ಧ ಮಾತನಾಡುವ ಮೂಲಕ ರಾಜಕೀಯದಲ್ಲಿ ಬದುಕುಳಿದಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ