ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮುಂದಿನ ವರ್ಷವೂ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಕಸರತ್ತು?: ಹೈ ಕಮಾಂಡ್ ಹಾಗೂ ಸಮುದಾಯ ಓಲೈಕೆಗಾಗಿ ಹಲವು ಯೋಜನೆ!

ಸಿದ್ದರಾಮಯ್ಯ ಪುತ್ರ ಎಂಎಲ್‌ಸಿ ಡಾ. ಯತೀಂದ್ರ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಸಿಎಂ ಬೆಂಬಲಿಗರು ಸಿದ್ದರಾಮಯ್ಯ 2028 ರವರೆಗೆ ಸಿಎಂ ಆಗಬೇಕೆಂದು ಎಂಬ ಮಹತ್ವಾಕಾಂಕ್ಷೆಯನ್ನು ಪ್ರತಿಬಿಂಬಿಸುತ್ತಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ ಮೂಲಕ ಮುಂದೆಯೂ ನಾವೇ ಮುಖ್ಯಮಂತ್ರಿಯಾಗಿ ಮುಂದುವರಿಯಬಹುದು, ಅಂದರೆ 2026-27ರ ಬಜೆಟ್ ಮಂಡಿಸಬಹುದು ಎಂಬ ಸಂದೇಶ ರವಾನಿಸಿದ್ದಾರೆ.

ಸಿದ್ದರಾಮಯ್ಯ ಪುತ್ರ ಎಂಎಲ್‌ಸಿ ಡಾ. ಯತೀಂದ್ರ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಸಿಎಂ ಬೆಂಬಲಿಗರು ಸಿದ್ದರಾಮಯ್ಯ 2028 ರವರೆಗೆ ಸಿಎಂ ಆಗಬೇಕೆಂದು ಎಂಬ ಮಹತ್ವಾಕಾಂಕ್ಷೆಯನ್ನು ಪ್ರತಿಬಿಂಬಿಸುತ್ತಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

ಸಿದ್ದರಾಮಯ್ಯ ತಮ್ಮ ಎರಡೂವರೆ ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಸಜ್ಜಾಗಿರುವ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ಮೇಲೆ ಭರವಸೆ ಇಡುವುದರ ಜೊತೆಗೆ ಹೊಸ ತಂತ್ರವನ್ನು ಅಳವಡಿಸಿಕೊಳ್ಳಬೇಕಾಗಬಹುದು.

ಅಹಿಂದಕ್ಕೆ ಗಣನೀಯ ಪ್ರಮಾಣದ ಹಣವನ್ನು ಹಂಚಿಕೆ ಮಾಡುವುದರೊಂದಿಗೆ, ಸಿದ್ದರಾಮಯ್ಯ ಮುಂದೆಯೂ ತಾವೇ ಸಿಎಂ ಆಗಿ ಮುಂದುವರಿಯ ಬಯಸುತ್ತಿದ್ದಾರೆ. ಅಹಿಂದಕ್ಕೆ 8,000 ಕೋಟಿ ರೂ. ಹಂಚಿಕೆಯೊಂದಿಗೆ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಮಹತ್ವಾಕಾಂಕ್ಷೆಯಾಗಿದೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅವರು ತಮ್ಮ ಪಕ್ಷವನ್ನು ಲೆಕ್ಕಿಸದೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುರಿಯನ್ನು ಹೊಂದಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದಕ್ಕೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸರಾಸರಿ 35 ಕೋಟಿ ರೂ.ಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ವಿಧಿ ವಿಧಾನಗಳು ಇನ್ನೂ ಅಂತಿಮಗೊಂಡಿಲ್ಲವಾದರೂ, ಅನುದಾನ ಬಿಡುಗಡೆ ಮಾಡುವಲ್ಲಿ ಸಿಎಂ ಅವರದ್ದೇ ಅಂತಿಮ ನಿರ್ಧಾರವಾಗಿರಲಿದೆ.

ಸದ್ಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಗಾಗಿ (ಎಲ್‌ಎಡಿ) ವಾರ್ಷಿಕ 2 ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಹಿರಿಯ ಶಾಸಕರೊಬ್ಬರು ಹೇಳಿದರು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಭಾರಿ ಹಣವನ್ನು ಹಂಚಿಕೆ ಮಾಡಿದರೂ, ಆ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಿದ್ದರಾಮಯ್ಯ ಹೇಗೆ ನಿವಾರಿಸುತ್ತಾರೆ ಎಂಬುದನ್ನು ನೋಡುವುದು ಬಹಳ ಕುತೂಹಲ ಮೂಡಿಸಿದೆ. ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು 38,860.52 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಲ್ಲದಿದ್ದರೆ, ಮಾಜಿ ಸಿಎಂ ದಿವಂಗತ ಡಿ. ದೇವರಾಜ್ ಅರಸು ಅವರ ಏಳು ವರ್ಷ 238 ದಿನಗಳ ಅಧಿಕಾರಾವಧಿಯೊಂದಿಗೆ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆಯನ್ನು ಮುರಿಯುವ ಗುರಿಯನ್ನು ಹೊಂದಿರುವ ಸಿದ್ದರಾಮಯ್ಯ, ತಮ್ಮ ಇಮೇಜ್ ಅನ್ನು ಹಾಗೆಯೇ ಉಳಿಸಿಕೊಳ್ಳಲು ಬಜೆಟ್‌ನಲ್ಲಿ ತಂತ್ರಗಳನ್ನು ಬಳಸಿದ್ದಾರೆ.

ಅವರು ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ 2.0, ರಾಜೀವ್ ವಸತಿ ನಿಗಮದಡಿಯಲ್ಲಿ 12,153 ಫಲಾನುಭವಿಗಳಿಗೆ 1,000 ಕೋಟಿ ರೂ.ಗಳಲ್ಲಿ ಆರ್ಥಿಕ ನೆರವು ನೀಡಲು ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆ ಮತ್ತು ಮುಖ್ಯಮಂತ್ರಿಗಳ ಅಲ್ಪಸಂಖ್ಯಾತ ವಸಾಹತು ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ 1,000 ಕೋಟಿ ರೂ.ಗಳನ್ನು ಘೋಷಿಸಿದ್ದಾರೆ.

ಅಹಿಂದ ಸಮುದಾಯಗಳಿಗೆ ಪ್ರಯೋಜನವನ್ನು ನೀಡುವುದರ ಜೊತೆಗೆ, ತಮ್ಮ ಕುರುಬ ಸಮುದಾಯ ಪಕ್ಷದ ಹೈಕಮಾಂಡ್, ಪ್ರಭಾವಿ ಕಾಂಗ್ರೆಸ್ ನಾಯಕರು ಮತ್ತು ಅವರ ಹುಟ್ಟೂರು ಮೈಸೂರು ಸೇರಿದಂತೆ ಹಿಂದುಳಿದ ವರ್ಗಗಳನ್ನು ಓಲೈಸಲು ಸಿಎಂ ಯೋಜನೆಗಳನ್ನು ರೂಪಿಸಿದ್ದಾರೆ.

ಹಿಂದುಳಿದ ವರ್ಗಗಳ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ಡಿ ದೇವರಾಜ್ ಅರಸ್ ವಸತಿ ಶಾಲೆಗಳು, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 34 ಕೋಟಿ ರೂ.ಗಳು, 'ಅನುಭವ ಮಂಟಪ' ಪೂರ್ಣಗೊಳಿಸಲು ಕ್ರಮಗಳು, ಯಲಬುರ್ಗಿ ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ (6 ಕೋಟಿ ರೂ.ಗಳು) ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ 28 ಕೋಟಿ ರೂ ಅನುದಾನ ನೀಡುವುದರೊಂದಿಗೆ ಹಿಂದುಳಿದ ಸಮುದಾಯಗಳನ್ನು ಮೆಚ್ಚಿಸಲು ಅವರು ಪ್ರಯತ್ನಿಸಿದ್ದಾರೆ.

ಗ್ರಾಮೀಣ ರಸ್ತೆ ಸಂಪರ್ಕಕ್ಕಾಗಿ 5,200 ಕೋಟಿ ರೂ.ಗಳ ಪ್ರಗತಿ ಪಥ ಯೋಜನೆ, ಕಲ್ಯಾಣ ಕರ್ನಾಟಕದ 38 ವಿಧಾನಸಭಾ ಕ್ಷೇತ್ರಗಳಿಗೆ 1,000 ಕೋಟಿ ರೂ.ಗಳ ಯೋಜನೆಯಡಿ 286 ಯೋಜನೆಗಳು, ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5,000 ಕೋಟಿ ರೂ.ಗಳ ಕಾರ್ಯಕ್ರಮದ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತಷ್ಟು ಹತ್ತಿರವಾಗುವ ಸಾಧ್ಯತೆಯಿದೆ.

ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಶಿವಕುಮಾರ್ ಕೂಡ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ವಾರ್ಷಿಕ 3,000 ಕೋಟಿ ರೂ.ಗಳ ಅನುದಾನವನ್ನು 7,000 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿರುವುದರಿಂದ ಹೆಚ್ಚಿನದನ್ನು ಕೇಳಲು ಸಾಧ್ಯವಾಗಲಿಲ್ಲ, ಆದರೆ ಸರ್ಕಾರವು 40,000 ಕೋಟಿ ರೂ.ಗಳ ವೆಚ್ಚದಲ್ಲಿ ಸುರಂಗ ರಸ್ತೆ ಯೋಜನೆಗಳಿಗೆ 19,000 ಕೋಟಿ ರೂ.ಗಳನ್ನು ಬಿಬಿಎಂಪಿಗೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT